ಡಾ. ಚೂಂತಾರು ಅವರಿಗೆ ಕೇಂದ್ರ ಸರಕಾರದ ಡಿ.ಜಿ ಡಿಸ್ಕ್ ಪುರಸ್ಕಾರ

Upayuktha
0


ಬೆಂಗಳೂರು: ಕೇಂದ್ರ ಗೃಹ ಸಚಿವಾಲಯ ನೀಡುವ ಡಿಜಿ ಡಿಸ್ಕ್ ಪುರಸ್ಕಾರವನ್ನು ಬೆಂಗಳೂರಿನ ಪೊಲೀಸ್ ಮಹಾನಿರ್ದೇಶಕರ ಕಚೇರಿಯಲ್ಲಿ ನಡೆದ ಗೃಹರಕ್ಷಕ ದಳದ 62ನೆಯ ಉತ್ಥಾನ ದಿನಾಚರಣೆ ಪ್ರಯುಕ್ತ ಇಂದು (ಡಿ.6) ಪೊಲೀಸ್ ಮಹಾನಿರ್ದೇಶಕರು ಹಾಗೂ ಗೃಹರಕ್ಷಕದಳ ಮಹಾ ಸಮಾದೇಷ್ಠರಾದ ಪ್ರಶಾಂತ್ ಕುಮಾರ್ ಸಿಂಗ್ ಠಾಕೂರ್ (ಐಪಿಎಸ್) ಅವರು ದ.ಕ ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರಾದ ಡಾ. ಮುರಲೀ ಮೋಹನ್ ಚೂಂತಾರು ಅವರಿಗೆ ಪ್ರದಾನ ಮಾಡಿದರು.


ಕಳೆದ ಹತ್ತು ವರ್ಷಗಳಿಂದ ದ.ಕ ಜಿಲ್ಲಾ ಗೃಹ ರಕ್ಷಕ ದಳದಲ್ಲಿ ನೀಡಿದ ನ್ಯಾಯಸಮ್ಮತ, ನಿಷ್ಕಾಮ, ನಿಷ್ಕಳಂಕ ಮತ್ತು ಪ್ರಾಮಾಣಿಕ ಸೇವೆಯನ್ನು ಗುರುತಿಸಿ ಡಾ. ಚೂಂತಾರು ಅವರಿಗೆ ಈ ಪುರಸ್ಕಾರವನ್ನು ನೀಡಲಾಗಿದೆ.


ಈ ಸಂದರ್ಭದಲ್ಲಿ ಗೃಹರಕ್ಷಕದಳದ ಉಪ ಮಹಾ ಸಮಾದೇಷ್ಠರಾದ ಅಕ್ಷಯ್.ಎಂ. ಹಾಕೆ (ಐ.ಪಿ.ಎಸ್.), ನಂಜುಂಡ ಸ್ವಾಮಿ (ಐಪಿಎಸ್), ಅಪರ ಮಹಾ ಸಮಾದೇಷ್ಟರು ಗೃಹರಕ್ಷಕ ದಳ ಹಾಗೂ ಇತರ ಉನ್ನತ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
Best Summer Deals Marvellous May Offers at Mandovi Motors
Best Summer Deals Marvellous May Offers at Mandovi Motors
To Top