ದೇಸೀ ಮತ್ತು ಸಾಂಪ್ರದಾಯಿಕ ದಿನದ ಆಚರಣೆ ಮತ್ತು ಮಹತ್ವ: ಪ್ರಶಿಕ್ಷಣ ಕಾರ್ಯಕ್ರಮ

Upayuktha
0


ಉಜಿರೆ: ಬಂಗಾಡಿಯ ಇಂದಬೆಟ್ಟು (ಕಲ್ಲಾಜೆ) ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯುತ್ತಿರುವ ಉಜಿರೆ ಶ್ರೀ ಧ. ಮಂ. ಕಾಲೇಜಿನ ಎನ್ನೆಸ್ಸೆಸ್ ಘಟಕಗಳ ಒಂದು ವಾರದ ವಾರ್ಷಿಕ ವಿಶೇಷ ಶಿಬಿರದಲ್ಲಿ ಐದನೇ ದಿನ (ಡಿ. 9) ‘ದೇಸೀ ಮತ್ತು ಸಾಂಪ್ರದಾಯಿಕ ದಿನದ ಆಚರಣೆ ಮತ್ತು ಮಹತ್ವ’ ಕುರಿತು ಪ್ರಶಿಕ್ಷಣ ಕಾರ್ಯಕ್ರಮ ನಡೆಯಿತು.


ರಾಜ್ಯ ಪ್ರಶಸ್ತಿ ಪುರಸ್ಕೃತ, ಕಾಲೇಜಿನ ಎನ್ ಎಸ್ ಎಸ್ ಘಟಕದ ಹಿರಿಯ ಸ್ವಯಂಸೇವಕ ಧನುಷ್ ಕೆ.ಪಿ. ಸಂಪನ್ಮೂಲ ವ್ಯಕ್ತಿಯಾಗಿದ್ದರು. ಭಾರತೀಯ ಸಂಸ್ಕೃತಿಯು ಬೇರೆ ದೇಶಗಳ ಸಂಸ್ಕೃತಿ, ಸಂಸ್ಕಾರಗಳಿಂದ ಹೇಗೆ ಭಿನ್ನವಾಗಿದೆ ಎಂಬುದನ್ನು ಸ್ವಯಂಸೇವಕರಿಗೆ ತಿಳಿಸಿಕೊಟ್ಟರು. 


ಅಲ್ಲದೆ, ಬಾಳೆಎಲೆಯಲ್ಲಿ ಊಟ ಮಾಡುವುದರ ಪ್ರಯೋಜನ ತಿಳಿಸಿದರು. ಸಾಂಪ್ರದಾಯಿಕ ಉಡುಪು ಧರಿಸಿ ಸ್ವಯಂಸೇವಕರು ಬಾಳೆ ಎಲೆಯಲ್ಲಿ ಮಧ್ಯಾಹ್ನದ ಊಟವನ್ನು ಸವಿದರು.


ಯೋಜನಾಧಿಕಾರಿ ಡಾ. ಮಹೇಶ್ ಕುಮಾರ್ ಶೆಟ್ಟಿ ಹೆಚ್. ಪ್ರಾಸ್ತಾವಿಕ ನುಡಿಗಳನ್ನಾಡಿದರು. ಇನ್ನೋರ್ವ ಯೋಜನಾಧಿಕಾರಿ ಪ್ರೊ. ದೀಪ ಆರ್.ಪಿ., ಶಿಬಿರಾಧಿಕಾರಿಗಳಾದ ಅಮಿತ್ ಕುಮಾರ್ ಮತ್ತು ಶ್ರುತಿ ಮಣಕೀಕರ್ ಹಾಗೂ ಹಿರಿಯ ಸ್ವಯಂಸೇವಕರು ಉಪಸ್ಥಿತರಿದ್ದರು.


ಹಿರಿಯ ಸ್ವಯಂಸೇವಕಿ ಸಿಂಚನಾ ಕಾರ್ಯಕ್ರಮ ನಿರ್ವಹಿಸಿದರು.



 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top