ಅನುದಾನದ ಕೊರತೆಯಿಂದ ಅಭಿವೃದ್ಧಿ ಸ್ಥಗಿತ: ಸರಕಾರದ ಗಮನ ಸೆಳೆದ ಶಾಸಕ ಕಾಮತ್

Upayuktha
0





ಬೆಳಗಾವಿ: ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಮಂಗಳೂರು ನಗರ ದಕ್ಷಿಣಕ್ಕೆ ಸಂಬಂಧಿಸಿದಂತೆ ಹಲವು ವಿಚಾರಗಳ ಬಗ್ಗೆ ಶಾಸಕ ವೇದವ್ಯಾಸ ಕಾಮತ್ ರವರು ಪ್ರಸ್ತಾಪಿಸಿ ಸರ್ಕಾರದ ಗಮನವನ್ನು ಸೆಳೆದರು.



ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಮಂಗಳೂರು ಮಹಾನಗರ ಪಾಲಿಕೆಗೆ ಬಿಡುಗಡೆಗೊಳಿಸಲಾದ ಅನುದಾನದ ಬಗ್ಗೆ ಪ್ರಶ್ನಿಸಿ, ಕೇವಲ ಕೇಂದ್ರ ಸರ್ಕಾರದ ಅನುದಾನದಿಂದಲೇ ಮಹಾನಗರ ಪಾಲಿಕೆಯ 60 ವಾರ್ಡುಗಳನ್ನೂ ಅಭಿವೃದ್ಧಿಗೊಳಿಸಲು ಅಸಾಧ್ಯ, ರಾಜ್ಯ ಸರ್ಕಾರವೂ ವಿಶೇಷ ಅನುದಾನಗಳನ್ನು ನೀಡುವ ಬಗ್ಗೆ ಕ್ರಮವಹಿಸಬೇಕು.



ಕಳೆದ ಅವಧಿಯಲ್ಲಿ ಕೆಯುಡಿಎಫ್ ಸಿ ವತಿಯಿಂದ ಕ್ಷೇತ್ರದಲ್ಲಿ ಆರಂಭಗೊಂಡಿದ್ದ ಕಾಮಗಾರಿಗಳಿಂದಾಗಿ ಹಲವೆಡೆ ರಸ್ತೆಗಳು ಹದಗೆಟ್ಟಿದ್ದು ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಕಾಮಗಾರಿ ಮುಗಿದ ನಂತರ ಮರು ರಸ್ತೆ ನಿರ್ಮಾಣಕ್ಕೆಂದೇ ಈ ಹಿಂದೆ ಮೀಸಲಿರಿಸಲಾಗಿದ್ದ ಸುಮಾರು 72 ಕೋಟಿ ಅನುದಾನವನ್ನು ಬೇರೆ ಯೋಜನೆಗಳಿಗೆ ವರ್ಗಾಯಿಸಿದ್ದೇ ಇಂದು ಇಲ್ಲಿನ ಹೊಂಡಗಳನ್ನೂ ಸಹ ಮುಚ್ಚಲಾಗದ ಪರಿಸ್ಥಿತಿ ನಿರ್ಮಾಣವಾಗಿರುವುದಕ್ಕೆ ಮೂಲ ಕಾರಣ, ಹಾಗಾಗಿ ಇದನ್ನು ಸಚಿವರು ಆದ್ಯತೆಯ ಮೇರೆಗೆ ಗಂಭೀರವಾಗಿ ಪರಿಗಣಿಸಬೇಕು ಎಂದು ಆಗ್ರಹಿಸಿದರು.



ಅಲ್ಲದೇ ಒಂದೂವರೆ ವರ್ಷ ಕಳೆದರೂ ಅಮೃತ್ ಯೋಜನೆಗಳು ಇನ್ನೂ ಸಹ ಟೆಂಡರ್ ಹಂತದಲ್ಲಿಯೇ ಇರುವ ಬಗ್ಗೆ, ಬಹು ಬೇಡಿಕೆಯ ಜಲಸಿರಿ ಯೋಜನೆ ಸ್ಥಗಿತಗೊಂಡಿರುವ ಬಗ್ಗೆ, ಪ್ರಕೃತಿ ವಿಕೋಪದಿಂದಾಗಿ ನಗರದ ಅಲ್ಲಲ್ಲಿ ರಸ್ತೆ ಸಹಿತ ಅನೇಕ ರೀತಿಯ ಹಾನಿಯ ಬಗ್ಗೆ ಸಂಬಂಧಪಟ್ಟ ಸಚಿವರಿಗೆ ಮನವಿ ಸಲ್ಲಿಸಿದ್ದರೂ ಸೂಕ್ತ ಸ್ಪಂದನೆ ದೊರಕದ ಬಗ್ಗೆ ಹಾಗೂ ಈ ಹಿಂದಿನ ಅವಧಿಯ ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆಯ 125 ಕೋಟಿಯ ಯೋಜನೆಯನ್ನು ಪ್ರಸ್ತುತ ರಾಜ್ಯ ಸರ್ಕಾರವು ಸ್ಥಗಿತಗೊಳಿಸಿದ್ದು ಅದನ್ನು ಪುನರ್ ಆರಂಭಿಸುವ ಬಗ್ಗೆ ಶಾಸಕರು ಸರ್ಕಾರದ ಗಮನ ಸೆಳೆದರು.




ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

 

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top