ಪೆರ್ಲ: ಕಾಟುಕುಕ್ಕೆ ಶ್ರೀಸುಬ್ರಾಯ ದೇವಸ್ಥಾನದಲ್ಲಿ ವರ್ಷಂಪ್ರತಿಯಂತೆ ಜರಗುವ ಧನುಪೂಜೆ ಮಹೋತ್ಸವ ಹಾಗೂ ಧನು ಮಾಸದ ವಿಶೇಷ ಭಜನೆ ಸೋಮವಾರದಿಂದ ಆರಂಭಗೊಂಡಿದೆ.
ಕ್ಷೇತ್ರ ತಂತ್ರಿವರ್ಯರಾದ ಬ್ರಹ್ಮಶ್ರೀ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಜರಗುತ್ತಿರುವ ಧನುಪೂಜಾ ಮಹೋತ್ಸವದಲ್ಲಿ ಪ್ರತಿದಿನ ಬೆಳಗ್ಗೆ 5 ಗಂಟೆಯಿಂದ ವಿವಿಧ ಭಜನಾ ತಂಡಗಳಿಂದ ಭಜನಾ ಸಂಕೀರ್ತನೆ, 6 ಗಂಟೆಗೆ ಧನುಪೂಜೆ, 6.30ಕ್ಕೆ ಪ್ರಾತಃಕಾಲ ಪೂಜೆ, ಬಳಿಕ ಪ್ರಸಾದ ವಿತರಣೆ ಉಪಹಾರ ಜರಗುತ್ತಿದೆ.ತಿಂಗಳ ಪರ್ಯಂತ ಜರಗುವ ಧನುಪೂಜಾ ಮಹೋತ್ಸವದ ಯಶಸ್ವಿಗೆ ಕ್ಷೇತ್ರ ಉತ್ಸವ ಸಮಿತಿ ಹಾಗೂ ಆಡಳಿತ ಮಂಡಳಿ, ಊರ ಭಗವ್ಬಕ್ತರು, ವಿವಿಧ ಸಂಘ ಸಂಸ್ಥೆಗಳು ಸಹಕರಿಸುತ್ತಿದೆ ಎಂದು ಕ್ಷೇತ್ರ ಆಡಳಿತ ಮೊಕ್ತೇಸರ ಪಡ್ಡಂಬೈಲು ತಾರನಾಥ ರೈ ಪೆರ್ಲ ತಿಳಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ