ಪುತ್ತೂರು: ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರ ಆವರಣ ನಯನ ಸಭಾಂಗಣದಲ್ಲಿ ನಾಟ್ಯ ಮಯೂರಿ ನೃತ್ಯ ಸಂಸ್ಥೆಯು ಆಯೋಜಿಸಿದ ಭಾರತ ಭೂಷಣ ಮತ್ತು ಕರುನಾಡಭೂಷಣ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪುತ್ತೂರಿನ ಧನ್ವಿ ಜೆ ರೈ ಯವರನ್ನು ಕರುನಾಡಭೂಷಣ ಪ್ರಶಸ್ತಿ ನೀಡಿ ಗೌರವಿಸಿದರು.
ಈ ಸಂದರ್ಭದಲ್ಲಿ ಟ್ರಸ್ಟ್ ನ ಗೌರವ ಅಧ್ಯಕ್ಷ ಡಾ ಕೆಂಚನೂರು ಶಂಕರ, ವಿದುಷಿ ಪ್ರೇಮಾಂಜಲಿ ಆಚಾರ್ಯ, ತೋತಾಪುರಿ ಸೋಮಶೇಖರ ಗುರೂಜಿ, ವಾಣಿಜ್ಯೋದ್ಯಮಿ ಹಾಗೂ ಕೆಪಿಸಿಸಿ ಸಂಯೋಜಕ ಮಂಜುನಾಥ ಶೆಟ್ಟಿ, ಬೆಂಗಳೂರು ಬಂಟರ ಸಂಘದ ಉಪಾಧ್ಯಕ್ಷೆ ಶ್ರೀಮತಿ ಕಾಂತಿ ಶೆಟ್ಟಿ, ಪುತ್ತೂರು ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಅಧ್ಯಕ್ಷೆ ಶ್ರೀಮತಿ ಮಲ್ಲಿಕಾ ಜೆ ರೈ, ಅಂತರಾಷ್ಟ್ರೀಯ ಚೆಸ್ ತರಬೇತುದಾರ ಮುನಿರಾಜು ಹಾಗೂ ಇತರರು ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ