ಮಂಗಳೂರು: ಕೆನರಾ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ಗಣೇಶ್ ಶೆಟ್ಟಿ ಅವರು ಮಂಗಳೂರು ವಿಶ್ವವಿದ್ಯಾನಿಲಯದ ರಾಜ್ಯ ಶಿಕ್ಷಣ ನೀತಿ ಪಠ್ಯಕ್ಕೆ ಅನುಗುಣವಾಗಿ ಪ್ರಥಮ ಪದವಿಯ ಪ್ರಥಮ ಸೆಮಿಸ್ಟರ್ ಗೆ ಸಂಬಂಧಿಸಿ ರಚಿಸಿದ 'ಕಾನ್ ಸ್ಟಿಟ್ಯೂಷನಲ್ ವೇಲ್ಯೂಸ್' ಎಂಬ ಪಠ್ಯಪುಸ್ತಕವನ್ನು ಕಾಲೇಜಿನ ಸಂಚಾಲಕರಾದ ಸಿಎ ಎಂ ಜಗನ್ನಾಥ ಕಾಮತ್ ಬಿಡುಗಡೆಗೊಳಿಸಿ ಮಾತನಾಡಿದರು.
ಜಾತ್ಯತೀತತೆ, ಸಮಾಜವಾದ, ಸಾರ್ವಭೌಮತ್ವ, ಪೌರತ್ವ, ನ್ಯಾಯ, ಸ್ವಾತಂತ್ರ್ಯ, ವಿವಿಧತೆಯಲ್ಲಿ ಏಕತೆ ಮುಂತಾದ ಮೌಲ್ಯಗಳನ್ನು ಒಳಗೊಂಡ ಈ ಪುಸ್ತಕವು ವಿದ್ಯಾರ್ಥಿಗಳ ಜ್ಞಾನ ವೃದ್ಧಿಗೆ ಪೂರಕವಾಗಿದ್ದು ಬಹಳ ಉಪಯುಕ್ತವಾಗಿದೆ ಎಂದು ಅವರು ನುಡಿದರು.
ವ್ಯವಸ್ಥಾಪಕರಾದ ಕೆ ಶಿವಾನಂದ ಶೆಣೈ,ಕಾಲೇಜಿನ ಪ್ರಾಂಶುಪಾಲೆ ಡಾ.ಪ್ರೇಮಲತಾ ವಿ,ಆಡಳಿತಾಧಿಕಾರಿ ಡಾ.ದೀಪ್ತಿ ನಾಯಕ್, ಡಾ. ಗಣೇಶ್ ಶೆಟ್ಟಿ, ಹಾಗೂ ವಿವಿಧ ವಿಭಾಗಗಳ ಉಪನ್ಯಾಸಕರು ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ