ಪಠ್ಯೇತರ ಚಟುವಟಿಕೆಗಳು ಕೌಶಲ್ಯವನ್ನು ವೃದ್ಧಿಸುತ್ತವೆ: ಅನ್ನಪೂರ್ಣ ಪಿ.ಜಿ

Upayuktha
0

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಕಲಾ ಸಂಘದ ಸಮಾರೋಪ



ಪುತ್ತೂರು: "ಕಾಲೇಜಿನಲ್ಲಿ ನಡೆಯುವ ವಿವಿಧ ಸಂಘದ ಚಟುವಟಿಕೆಗಳು ವಿದ್ಯಾರ್ಥಿಗಳಲ್ಲಿ ವಿಶೇಷ ಕೌಶಲ್ಯವನ್ನು ಬೆಳೆಸುವಲ್ಲಿ ಸಹಕಾರಿಯಾಗುತ್ತದೆ. ಕಲಾ ವಿಭಾಗವನ್ನು ಆಯ್ಕೆಮಾಡಿಕೊಂಡ ವಿದ್ಯಾರ್ಥಿಗಳು ಯಾವುದೇ ರೀತಿಯಲ್ಲಿ ಕೀಳರಿಮೆಗೆ ಒಳಗಾಗುವ ಅಗತ್ಯವಿಲ್ಲ. ಸಮಾಜದಲ್ಲಿ ಉನ್ನತ ಹುದ್ದೆಯನ್ನು ಅಲಂಕರಿಸಿರುವವರ ಶೈಕ್ಷಣಿಕ ಹಿನ್ನೆಲೆಯನ್ನು ಗಮನಿಸಿದರೆ ಈ ಅಂಶ ಸ್ಪಷ್ಟವಾಗುತ್ತದೆ. ವಿದ್ಯಾಭ್ಯಾಸದ ಹಂತದಲ್ಲಿ ಬೇರೆ ಬೇರೆ ಚಟುವಟಿಕೆಗಳಲ್ಲಿ ನಾವು ಹೇಗೆ ತೊಡಗಿಸಿಕೊಂಡಿದ್ದೇವೆ ಎಂಬುದರ ಆಧಾರದ ಮೇಲೆ ನಮ್ಮ ಭವಿಷ್ಯದ ದಿನಗಳು ನಿಂತಿರುತ್ತವೆ" ಎಂದು ವಿವೇಕಾನಂದ ಮಹಾವಿದ್ಯಾಲಯದ ವ್ಯವಹಾರ ಅಧ್ಯಯನ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಶ್ರೀಮತಿ ಅನ್ನಪೂರ್ಣ ಪಿ.ಜಿ ಹೇಳಿದರು.


ಅವರು ವಿವೇಕಾನಂದ ಪದವಿಪೂರ್ವ ಕಾಲೇಜಿನ ವೈದೇಹಿ ಸಭಾಂಗಣದಲ್ಲಿ ನಡೆದ ಕಲಾಸಂಘದ ಸಮಾರೋಪ ಸಮಾರಂಭದ ಮುಖ್ಯ ಅತಿಥಿಯಾಗಿ ಮಾತನಾಡಿದರು.


ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಅಡಳಿತ ಮಂಡಳಿಯ ನಿರ್ದೇಶಕ ಡಾ. ಕೆ.ಎನ್‌ ಸುಬ್ರಹ್ಮಣ್ಯ ಅವರು ಮಾತನಾಡುತ್ತಾ, " ಇಂದಿನ ಕಾಲಘಟ್ಟದಲ್ಲಿ ಎಲ್ಲಾ ಕ್ಷೇತ್ರಗಳಲ್ಲಿ ಸ್ಪರ್ಧೆಗಳು ಇರುವುದು ಸಹಜ. ವಿದ್ಯಾರ್ಥಿಗಳು ಕೇವಲ ಪಠ್ಯಪುಸ್ತಕಕ್ಕೆ ಮಾತ್ರ ಸೀಮಿತರಾಗದೆ, ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಲ್ಲಿ ಮಂದಿನ ದಿನಗಳಲ್ಲಿ ಸಾಕಷ್ಟು ಅವಕಾಶಗಳು ಲಭ್ಯವಾಗಬಲ್ಲದು" ಎಂದು ನುಡಿದರು.


ಕಾರ್ಯಕ್ರಮದ ವೇದಿಕೆಯಲ್ಲಿ ಕಲಾಸಂಘದ ಸಂಯೋಜಕಿ ಮೋನಿಷ ಎನ್‌ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಕಲಾಸಂಘದ ವತಿಯಿಂದ ನಡೆಸಲ್ಪಟ್ಟ ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು.


ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ಮಹೇಶ ನಿಟಿಲಾಪುರ, ಉಪಪ್ರಾಂಶುಪಾಲ ದೇವಿಚರಣ್‌ ರೈ, ಉಪನ್ಯಾಸಕ, ಉಪನ್ಯಾಸಕೇತರ ವೃಂದದವರು ಹಾಗೂ ಕಲಾ ವಿಭಾಗದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ವಿದ್ಯಾರ್ಥಿನಿಯರಾದ ರೂಪಶ್ರೀ ಸ್ವಾಗತಿಸಿ, ಯುಕ್ತ ವಂದಿಸಿದರು. ವಿದ್ಯಾರ್ಥಿನಿ ವರ್ಷಾ ನಿರೂಪಿಸಿದರು.


  ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top