ಸಹಕಾರ ರತ್ನ ಪ್ರಶಸ್ತಿ ಪಡೆದ ರವೀಂದ್ರ ಕಂಬಳಿಗೆ ಸನ್ಮಾನ

Chandrashekhara Kulamarva
0


ಬಂಟ್ವಾಳ: ಸಹಕಾರ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದವರಿಗೆ ಕೊಡಮಾಡುವ ರಾಜ್ಯ ಮಟ್ಟದ 2024-25 ನೇ ಸಾಲಿನ 'ಸಹಕಾರ ರತ್ನ' ಪ್ರಶಸ್ತಿಗೆ ಭಾಜನರಾಗಿರುವ ಬಂಟ್ವಾಳ ತಾಲೂಕು ಕೃಷಿ ಉತ್ಪನ್ನ ಮಾರಾಟ ಸಹಕಾರ ಸಂಘದ ಅಧ್ಯಕ್ಷ ರವೀಂದ್ರ ಕಂಬಳಿ ಇವರನ್ನು ಸಂಘದ ಆಡಳಿತ ಮಂಡಳಿ ಸಭೆಯಲ್ಲಿ ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಸಂಘದ ನಿರ್ದೇಶಕ ರಾಜೇಶ್ ಶೆಟ್ಟಿ ಕೊನೆರಬೆಟ್ಟು ಅಭಿನಂದಿಸಿ ಗೌರವಿಸಿದರು.


ಈ ಸಂದರ್ಭದಲ್ಲಿ ತಾಲೂಕು ಕೃಷಿ ಉತ್ಪನ್ನ ಮಾರಾಟ ಸಹಕಾರ ಸಂಘದ ಉಪಾಧ್ಯಕ್ಷೆ ಶಶಿಕಲಾ ಉಡುಪ, ನಿರ್ದೇಶಕರಾದ ಬಿ. ಟಿ. ನಾರಾಯಣ ಭಟ್, ಸುಂದರ ಭಂಡಾರಿ ರಾಯಿ, ಪದ್ಮನಾಭ ಕಿಡೆಬೆಟ್ಟು ಫರಂಗಿಪೇಟೆ, ಮನೋರಾಜ್ ಶೆಟ್ಟಿ, ವೆಂಕಟ್ರಾಯ ಪ್ರಭು ಕಲ್ಲಡ್ಕ, ರಾಮ ನಾಯ್ಕ, ರತ್ನ, ಜ್ಯಾನೇಶ್ವರ ಪ್ರಭು ಉಪಸ್ಥಿತರಿದ್ದರು. ಸಂಘದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಯು. ಧರ್ಮಪಾಲ ಭಂಡಾರಿ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.

ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 


إرسال تعليق

0 تعليقات
إرسال تعليق (0)
To Top