ಪೆರ್ಲ: ಪೇಟೆಯ ಕಟ್ಟಡವೊಂದಕ್ಕೆ ಶನಿವಾರ ತಡರಾತ್ರಿ ಬೆಂಕಿ ಹತ್ತಿಕೊಂಡಿದ್ದು ಐದು ಅಂಗಡಿಗಳು ಸಂಪೂರ್ಣವಾಗಿ ಹೊತ್ತಿ ಉರಿದು ನಾಶವಾಗಿದೆ. ಇಲ್ಲಿನ ಬದಿಯಡ್ಕ ಪುತ್ತೂರು ರಸ್ತೆಯ ಎಡಭಾಗದಲ್ಲಿರುವ ಪೂಜಾ ಫ್ಯಾನ್ಸಿ, ಪೈಗಳ ಕ್ಲೋತ್ ಸ್ಟೋರ್ ಸಹಿತ ಪತ್ರಿಕಾ ಅಂಗಡಿ, ಪ್ರವೀಣ್ ಆಟೋಮೊಬೈಲ್ಸ್, ಸದಾತ್ ಸ್ಟೋರ್, ಗೌತಮ್ ಕೋಲ್ಡ್ ಹೌಸ್ ಎಂಬ ಅಂಗಡಿಗಳು ಈ ಕಟ್ಟಡದಲ್ಲಿ ಕಾರ್ಯಾಚರಿಸುತ್ತಿದ್ದು ಬೆಂಕಿಗೆ ಸಂಪೂರ್ಣ ಅಹುತಿಯಾಗಿವೆ.
ಶನಿವಾರ ಮಧ್ಯರಾತ್ರಿ 12 ಗಂಟೆಯ ಬಳಿಕ ಬೆಂಕಿ ಕಾಣಿಸಿಕೊಂಡಿದ್ದು, ಸ್ಥಳೀಯರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದರು. ಬೆಂಕಿಯ ಕೆನ್ನಾಲಿಗೆ ಸಮೀಪದ ಕಟ್ಟಡಗಳಿಗೂ ಹಬ್ಬುತ್ತಿತ್ತು. ಮಂಜೇಶ್ವರ ಮತ್ತು ಕಾಸರಗೋಡಿನಿಂದ ನಾಲ್ಕೈದು ಅಗ್ನಿಶಾಮಕ ತಂಡಗಳು ಬಂದಿದ್ದು ಸುಮಾರು ನಾಲ್ಕು ಗಂಟೆಗಳ ಸತತ ಪ್ರಯತ್ನದಿಂದ ಬೆಂಕಿ ನಂದಿಸಲಾಯಿತು. ಬೆಂಕಿ ಉರಿಯುವ ವೇಳೆ ಊರವರು ಜಮಾಯಿಸಿದ್ದು ರಕ್ಷಣಾ ಕಾರ್ಯದಲ್ಲಿ ಸಹಕರಿಸಿದ್ದರು.
ಯಾವ ಕಾರಣಕ್ಕೆ ಬೆಂಕಿ ಎಲ್ಲಿಂದ ಹತ್ತಿಕೊಂಡಿದೆ ಎಂದು ಖಚಿತವಾಗಿ ತಿಳಿದು ಬಂದಿಲ್ಲ. ಶಾರ್ಟ್ ಶಾರ್ಕ್ಯೂಟ್‌ನಿಂದ ಅವಘಡ ಸಂಭವಿಸಿರಬಹುದೆಂದು ಅಂದಾಜಿಸಲಾಗಿದೆ. ಎಣ್ಮಕಜೆ ಪಂಚಾಯತ್ ಅಧ್ಯಕ್ಷ ಸೋಮಶೇಖರ್ ಜೆ.ಎಸ್. ಸ್ಥಳದಲ್ಲಿದ್ದು ಪೆರ್ಲದ ಹಲವು ಸಂಘ ಸಂಸ್ಥೆಗಳು ನಾಗರಿಕರು ರಕ್ಷಣಾ ಕಾರ್ಯದಲ್ಲಿ ಸಹಕರಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ