ಹೇರೂರು: ಉಚಿತ ದಂತ ವೈದ್ಯಕೀಯ ಶಿಬಿರ

Chandrashekhara Kulamarva
0


 

ಬ್ರಹ್ಮಾವರ: ಶ್ರೀರಾಮ್ ಫ್ರೆಂಡ್ಸ್ ಹೇರೂರು, ಸುವರ್ಣ ಎಂಟರ್ಪ್ರೈಸಸ್ ಬ್ರಹ್ಮಾವರ ಮತ್ತು ಜಯಂಟ್ಸ್ ಗ್ರೂಪ್ ಆಫ್  ಬ್ರಹ್ಮಾವರ ಇದರ ವತಿಯಿಂದ ಹೇರೂರು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕೆಎಂಸಿ ಮಣಿಪಾಲ ದಂತ ವೈದ್ಯಕೀಯ ಕಾಲೇಜಿನ ಸಹಯೋಗದೊಂದಿಗೆ  ಉಚಿತ ದಂತ ವೈದ್ಯಕೀಯ ಶಿಬಿರ ಡಿ.1 ರಂದು ಆದಿತ್ಯವಾರ ನಡೆಯಿತು.


ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ, ಮಾಜಿ ಸಚಿವ ಜಯಪ್ರಕಾಶ್ ಹೆಗ್ಡೆ, ಊರಿನ ಸಹಕಾರದಿಂದ ಪ್ರತಿಯೊಂದು ಗ್ರಾಮದಲ್ಲಿ ಹೊಸ ಬದಲಾವಣೆ ಅಭಿವೃದ್ಧಿ ಸಾಧ್ಯವಾಗುವುದು ಕೇವಲ ಸರ್ಕಾರದಿಂದ ಮಾತ್ರವಲ್ಲದೆ ಗ್ರಾಮಸ್ಥರ ಸಹಕಾರ ಮತ್ತು ಮಾರ್ಗದರ್ಶನ ಇದ್ದಲ್ಲಿ ಗ್ರಾಮದ ಅದೇ ರೀತಿ ದೇಶದ ಅಭಿವೃದ್ಧಿ ಸಾಧ್ಯ ಎಂದು ತಿಳಿಸಿದರು. 


ಮುಖ್ಯ ಅತಿಥಿ ಮಾಜಿ ಸಚಿವ ಪ್ರಮೋದ ಮಧ್ವರಾಜ್  ಮಾತನಾಡಿ ಪ್ರತಿ ಹಳ್ಳಿಯಲ್ಲಿ ದಂತ ಚಿಕಿತ್ಸೆ ಶಿಬಿರಗಳನ್ನು ಸಂಘ ಸಂಸ್ಥೆಗಳು ಹಮ್ಮಿ ಕೊಳ್ಳುವ ಅವಶ್ಯಕತೆ ಇದೆ ಎಂದು ತಿಳಿಸಿದರು.


ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ್ ಹೇರೂರು ಮಾತನಾಡಿ, ಈ ಊರಿನ ಜನತೆಯ ಬೆಂಬಲದ ಪರಿಣಾಮ ಇಂದು ನಾನು ಪ್ರಾಧಿಕಾರದ ಅಧ್ಯಕ್ಷನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ ಗ್ರಾಮದ ಅಭಿವೃದ್ಧಿಯಲ್ಲಿ ನಮ್ಮ ಸಹಕಾರ ಸದಾ ಇದೆ ಎಂದು ಹೇಳಿದರು.


ವೇದಿಕೆಯಲ್ಲಿ ಸುವರ್ಣ ಎಂಟರ್ಪ್ರೈಸಸ್ ನ ಸುನಿತಾ ಮಧುಸೂಧನ್ , ಬ್ರಹ್ಮಾವರ ಜಯಂಟ್ಸ್ ಗ್ರೂಪ್  ಅಧ್ಯಕ್ಷ ಸುಂದರ ಪೂಜಾರಿ ಮೂಡುಕುಕ್ಕುಡೆ, ಶಾಲೆಯ ಮುಖ್ಯ ಶಿಕ್ಷಕಿ ಮಂಜುಳಾ ಜಯಕರ್, ಡಾ. ಪ್ರಜ್ಞಾ ನಾಯಕ್, ಶ್ರೀರಾಮ್ ಫ್ರೆಂಡ್ಸ್ ಅಧ್ಯಕ್ಷ ಸೂರಜ್ ಕೋಟ್ಯಾನ್, ಗೌರವಾಧ್ಯಕ್ಷ ಸುರೇಶ್ ಪೂಜಾರಿ, ಮುಂತಾದವರು ಉಪಸ್ಥಿತರಿದ್ದರು ಈ ಸಂದರ್ಭ ಉದ್ಯಮಿ ಚೇತನ್ ಕುಮಾರ್ ಶೆಟ್ಟಿ, ಲೆಕ್ಕಪರಿಶೋಧಕ ಜೀವನ್ ಕುಮಾರ್ ಶೆಟ್ಟಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ್ ಹೇರೂರು, ಅವರನ್ನು ಸನ್ಮಾನಿಸಲಾಯಿತು ಜಯಂಟ್ಸ್ ಫೆಡರೇಶನ್ ಮಾಜಿ ಅಧ್ಯಕ್ಷ ಮಧುಸೂಧನ್ ಹೇರೂರು ಪ್ರಸ್ತಾವನೆಗೈದರು.


ವಿಜಯ್ ಸನಿಲ್ ಸ್ವಾಗತಿಸಿದರು. ರಾಘವೇಂದ್ರ ಕವಾ೯ಲು ನಿರೂಪಿಸಿದರು, ರಾಮಕುಂದರ್ ವಂದಿಸಿದರು.



 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)
To Top