ಜಿಟಿಟಿಸಿ ಉಡುಪಿ ಮತ್ತು ನಿಟ್ಟೆ ಡೀಮ್‌ಡ್‌ ಟು ಬಿ ಯೂನಿವರ್ಸಿಟಿ ನಡುವೆ ಒಪ್ಪಂದಕ್ಕೆ ಸಹಿ

Upayuktha
0


ನಿಟ್ಟೆ: ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದಲ್ಲಿ ನ.28 ರಂದು ಜಿಟಿಟಿಸಿ ಉಡುಪಿ ಮತ್ತು ನಿಟ್ಟೆ ಡೀಮ್‌ಡ್‌ ಟು ಬಿ ಯೂನಿವರ್ಸಿಟಿ ನಡುವೆ ಒಪ್ಪಂದಕ್ಕೆ ಸಹಿ ಹಾಕಲಾಯಿತು. ಎಂಜಿನಿಯರಿಂಗ್ ಪಠ್ಯಕ್ರಮದಲ್ಲಿ ಇಂಟರ್ನಶಿಪ್ ಕಡ್ಡಾಯ ವಿಭಾಗವಾಗಿರುವುದರಿಂದ ಈ ಒಪ್ಪಂದವು ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಇಂಟರ್ನಶಿಪ್‌ಗಳನ್ನು ಪಡೆದುಕೊಳ್ಳಲು ಸಹಕಾರಿಯಾಗಲಿದೆ. 


ಮಂಜುನಾಥ್ ನಾಯಕ್, ಪ್ರಾಂಶುಪಾಲರು, ಜಿಟಿಟಿಸಿ, ಉಡುಪಿ, ಜಿಟಿಟಿಸಿಯ ಉಪನ್ಯಾಸಕರಾದ ದುರ್ಗಾಪ್ರಸಾದ್ ಶೆಟ್ಟಿ, ವಿಪಿನ್ ಕುಮಾರ್ ಉಪಸ್ಥಿತರಿದ್ದರು. ನಿಟ್ಟೆಯ ತಾಂತ್ರಿಕ ಕಾಲೇಜಿನ ಪ್ರಾಂಶುಪಾಲ ಡಾ.ನಿರಂಜನ್ ಎನ್ ಚಿಪ್ಲುಂಕರ್ ಅವರು ಇಂತಹ ಇಂಟರ್ನಶಿಪ್‌ಗಳ ಮೂಲಕ ಕೌಶಲ್ಯ ಅಭಿವೃದ್ಧಿಯ ಮಹತ್ವವನ್ನು ಪುನರುಚ್ಚರಿಸಿದರು. 


ನಿಟ್ಟೆ ಕಾಲೇಜಿನ ಐಐಸಿ ನಿರ್ದೇಶಕ ಡಾ.ಪರಮೇಶ್ವರನ್, ಉಪಪ್ರಾಂಶುಪಾಲ ಡಾ.ಐ.ರಮೇಶ್ ಮಿತ್ತಂತಾಯ, ಮೆಕ್ಯಾನಿಕಲ್ ವಿಭಾಗದ ಮುಖ್ಯಸ್ಥ ಡಾ.ಶ್ರೀನಿವಾಸ ಪೈ, ಎಲೆಕ್ಟ್ರಿಕಲ್ ವಿಭಾಗದ ಮುಖ್ಯಸ್ಥ ಡಾ.ಸೂರ್ಯನಾರಾಯಣ, ರೊಬೊಟಿಕ್ಸ್ ವಿಭಾಗದ ಮುಖ್ಯಸ್ಥ ಡಾ.ಮುರಳೀಧರ, ಎಲೆಕ್ಟ್ರಾನಿಕ್ಸ್ ವಿಭಾಗದ ಮುಖ್ಯಸ್ಥ ಡಾ.ಕೆ.ವಿ.ಎಸ್.ಎಸ್.ಸಾಯಿಯಾಮ್ ಉಪಸ್ಥಿತರಿದ್ದರು. ಕಾರ್ಯಕ್ರಮ ಸಂಯೋಜಕ ಡಾ.ಅನಂತಕೃಷ್ಣ ಸೋಮಯಾಜಿ ಮತ್ತು ಡಾ.ಅಜಿತ್ ಹೆಬ್ಬಾಳೆ ಕಾರ್ಯಕ್ರಮ ಸಂಯೋಜಿಸಿದರು.


  ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top