ಶಕ್ತಿನಗರದ ಮಹಿಳೆಯರಿಗೆ “ಶಕ್ತಿ” ತುಂಬಿದ ಸರಕಾರ

Upayuktha
0

ಉಚಿತ ಸಂಚಾರಕ್ಕಾಗಿ ನೂತನ ಸರಕಾರಿ ಬಸ್‌ಗೆ ಚಾಲನೆ 




ಮಂಗಳೂರು: ಶಕ್ತಿನಗರದ ಮಹಿಳೆಯರಿಗೆ ಸರ್ಕಾರದ ಶಕ್ತಿ ಯೋಜನೆಯಡಿಯಲ್ಲಿ ಉಚಿತ ಬಸ್ ಪ್ರಯಾಣದ ಬಸ್ ಚಾಲನೆ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಶಾಸಕ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಪಾಲ್ಗೊಂಡು ಬಸ್ ಗೆ ಚಾಲನೆ ನೀಡಿದರು.


ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, 2024ರ ಲೋಕಸಭಾ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ, ದಕ್ಷಿಣ ಕನ್ನಡ ಜಿಲ್ಲಾ ಕಾನೂನು, ಮಾನವ ಹಾಗೂ ಮಾಹಿತಿ ಹಕ್ಕು ಘಟಕದ ಅಧ್ಯಕ್ಷ ಮನೋರಾಜ್, ದಕ್ಷಿಣ ಕನ್ನಡ ಜಿಲ್ಲಾ ಕಾರ್ಮಿಕ ಘಟಕದ ಅಧ್ಯಕ್ಷ ಲಾರೆನ್ಸ್ ಡಿಸೋಜ ಹಾಗೂ ಸ್ಥಳೀಯ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.


ಮಹಿಳೆಯರ ಬಸ್ ಬೇಡಿಕೆಯ ಕುರಿತು ಮಂಜುನಾಥ ಭಂಡಾರಿಯವರು ಈ ಹಿಂದೆ ಸರಕಾರಕ್ಕೆ ಮನವಿ ಸಲ್ಲಿಸಿದ್ದರು. ಅದೀಗ ನೆರವೇರಿರುವುದು ಈ ಭಾಗದ ನಾಗರಿಕರ ಸಂತಸಕ್ಕೆ ಕಾರಣವಾಗಿದೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
Best Summer Deals Marvellous May Offers at Mandovi Motors
Best Summer Deals Marvellous May Offers at Mandovi Motors
To Top