'ಸ್ವಾವಲಂಬಿ ಬದುಕಿಗೆ ದಾರಿ ತೋರಿದವರು ಹೆಗ್ಗಡೆ'

Upayuktha
0


ಉಜಿರೆ: "ವೀರೇಂದ್ರ ಹೆಗ್ಗಡೆ ಅವರು ಮಹಿಳೆಯರಿಗೆ ಸ್ವಾವಲಂಬಿಯಾಗಿ ಬದುಕಲು ದಾರಿ ತೋರಿದ ಮಹಾಚೈತನ್ಯ” ಎಂದು ಉಜಿರೆಯ ಶ್ರೀ ರತ್ನಮಾನಸ ವಿದ್ಯಾರ್ಥಿನಿಲಯದ ಮೇಲ್ವಿಚಾರಕ ಕೆ. ಯತೀಶ್ ಬಣ್ಣಿಸಿದರು.


ಇಲ್ಲಿನ ಎಸ್.ಡಿ.ಎಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆ (ಐ.ಟಿ.ಐ.)ಯಲ್ಲಿ, ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಹಾಗೂ ಎಸ್.ಡಿ.ಎಂ. ಎಜುಕೇಶನಲ್ ಸೊಸೈಟಿಯ ಅಧ್ಯಕ್ಷರಾದ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ 77ನೇ ಹುಟ್ಟುಹಬ್ಬ ಆಚರಣೆ ಕಾರ್ಯಕ್ರಮದಲ್ಲಿ ಅವರು ಮುಖ್ಯ ಅತಿಥಿಯಾಗಿದ್ದರು.


“ಪೂಜ್ಯ ಖಾವಂದರು ಗ್ರಾಮೀಣ ಭಾಗದ ಬಡ, ಮಧ್ಯಮ ವರ್ಗದ ಜನರ ಆರ್ಥಿಕ ಶಕ್ತಿಯನ್ನು ಬಲಪಡಿಸುವ ಉದ್ದೇಶದಿಂದ ಹಮ್ಮಿಕೊಂಡ ಅನೇಕ ಕಾರ್ಯಕ್ರಮಗಳಿಂದ ಮಹಿಳೆಯರು ಆರ್ಥಿಕವಾಗಿ ಮುಂದುವರಿದಿದ್ದಾರೆ. ತಮ್ಮ ಗಂಡನ ಆರ್ಥಿಕ ಸಂಕಷ್ಟ ನಿವಾರಿಸುವಲ್ಲಿ ಬೆನ್ನೆಲುಬಾಗಿ ನಿಂತ ಪರಿಣಾಮ ಮಕ್ಕಳ ವಿದ್ಯಾಭ್ಯಾಸ ಉತ್ತಮಗೊಂಡಿದೆ” ಎಂದು ಅವರು ಹೇಳಿದರು.


ಸಂಸ್ಥೆಯ ವಿದ್ಯಾರ್ಥಿನಿಯರಾದ ಮಧುರ ಹಾಗೂ ಸೌಜನ್ಯ ಅವರು ಕಾರ್ಯಕ್ರಮ ಉದ್ಘಾಟಿಸಿದರು. ಪ್ರಾಂಶುಪಾಲ ವಿ. ಪ್ರಕಾಶ್ ಕಾಮತ್ ಉಪಸ್ಥಿತರಿದ್ದರು. 


ವಿದ್ಯಾರ್ಥಿನಿಯರಿಗೆ ಹೆಗ್ಗಡೆ ಅವರ ಕುರಿತು ಭಾಷಣ, ರಸಪ್ರಶ್ನೆ, ಭಾವಚಿತ್ರ ರಚನೆ ಹಾಗೂ ಪ್ರಬಂಧ ಸ್ಪರ್ಧೆ ಏರ್ಪಡಿಸಿ, ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಲಾವಣ್ಯ ಕಾರ್ಯಕ್ರಮ ನಿರ್ವಹಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top