ಮಂಗಳೂರಿನಲ್ಲಿ ಹೈಕೋರ್ಟ್ ಪೀಠ: ವಕೀಲರ ಸಂಘದಿಂದ ಸಿಎಂಗೆ ಮನವಿ ಸಲ್ಲಿಕೆ

Upayuktha
0


ಬೆಂಗಳೂರು: ಮಂಗಳೂರಿನಲ್ಲಿ ಉಚ್ಚ ನ್ಯಾಯಾಲಯದ ಪೀಠ ಸ್ಥಾಪನೆ ಮಾಡುವ ಬಗ್ಗೆ ಹೋರಾಟ ಸಮಿತಿ ಸಂಚಾಲಕ ಹಾಗೂ ವಿಧಾನ ಪರಿಷತ್ ಸದಸ್ಯ ಐವನ್ ಡಿ ಸೋಜರವರ ನೇತ್ರತ್ವದಲ್ಲಿ ವಿಧಾನ ಸಭೆಯ ಸಭಾಧ್ಯಕ್ಷ ಯು.ಟಿ ಖಾದರ್ ರವರ ಸಮ್ಮುಖದಲ್ಲಿ ಮುಖ್ಯಮಂತ್ರಿಯವರಿಗೆ, ಮಂಗಳೂರು ವಕೀಲರ ಸಂಘದ ಪರವಾಗಿ ಮನವಿಯನ್ನು ಸಲ್ಲಿಸಲಾಯಿತು.


ಈ ಬಗ್ಗೆ ಸಂಘದ ಅಧ್ಯಕ್ಷ ಎಚ್ ವಿ ರಾಘವೇಂದ್ರ ಮತ್ತು ಹಿರಿಯ ವಕೀಲ ಎಂ.ಪಿ ನೊರೂನ್ಹ ರವರು ಕರಾವಳಿಯಲ್ಲಿ ಉಚ್ಛ ನ್ಯಾಯಾಲಯದ ಸಂಚಾರಿ ಪೀಠವನ್ನು ಜರೂರಾಗಿ ಸ್ಥಾಪಿಸುವ ಬಗ್ಗೆ ಮನವರಿಕೆ ಮಾಡಿದರು. ಈ ಬಗ್ಗೆ ಮುಖ್ಯಮಂತ್ರಿ ಮತ್ತು ಕಾನೂನು ಸಚಿವರು ಉಚ್ಚ ನ್ಯಾಯಾಲಯದ ನ್ಯಾಯಧೀಶರೊಂದಿಗೆ ಅಭಿಪ್ರಾಯ ಪಡೆದು ಮುಂದಿನ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು. 


ನಿಯೋಗದಲ್ಲಿ ಶಾಸಕರಾದ ವೇದವ್ಯಾಸ್ ಕಾಮತ್, ಭರತ್ ಶೆಟ್ಟಿ, ಕಿಶೋರ್ ಕುಮಾರ್, ಮಂಜುನಾಥ್ ಭಂಡಾರಿ, ಮಾಜಿ ವಿಧಾನ ಪರಿಷತ್ ಸದಸ್ಯರು ಹಾಗೂ ಹಿರಿಯ ವಕೀಲರಾದ ಮೋನಪ್ಪ ಭಂಡಾರಿ, ಹಾಗೂ ಹಿರಿಯ ವಕೀಲರಾದ ಟಿ. ನಾರಾಯಣ ಪೂಜಾರಿ, ಯಶವಂತ ಮರೋಳಿ, ಉಪಾಧ್ಯಕ್ಷ ಸುಜಿತ್ ಕುಮಾರ್, ಬಂಟ್ವಾಳ ವಕೀಲರ ಸಂಘದ ಅಧ್ಯಕ್ಷ ರಿಚರ್ಡ್ ಡಿ ಕೊಸ್ತಾ, ಶ್ರೀಮತಿ ಶಾಲಿನಿ, ಶ್ರೀಮತಿ ಸುಮನಾ ಶರಣ್, ಸಂತೋಷ್ ಕುಮಾರ್, ದಿನಕರ್ ಶೆಟ್ಟಿ, ರಾಘವೇಂದ್ರ ರಾವ್, ಪ್ರಮೋದ್ ಕೆರ್ವಾಶೆ, ಜಗದೀಶ್ ಕೆ ಆರ್, ವಿಜಯ್ ಮಹಾತೇಶ್ ಸತೀಶ್ ಕುಮಾರ್, ವೀರೇಂದ್ರ ಸಿದ್ದಕಟ್ಟೆ ಉಪಸ್ಥಿತರಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top