ತೆಂಕನಿಡಿಯೂರು ಕಾಲೇಜು: ಮಾನವ ಹಕ್ಕುಗಳ ದಿನಾಚರಣೆ

Upayuktha
0


ತೆಂಕನಿಡಿಯೂರು: ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು, ಉಡುಪಿ ಇಲ್ಲಿನ ಐಕ್ಯೂಎಸಿ, ರಾಜ್ಯಶಾಸ್ತ್ರ ವಿಭಾಗ, ಎಂ.ಎಸ್.ಡಬ್ಲ್ಯೂ. ಸ್ನಾತಕೋತ್ತರ ವಿಭಾಗ ಹಾಗೂ ಯೂತ್‍ ರೆಡ್‍ಕ್ರಾಸ್ ಘಟಕಗಳ ಜಂಟಿ ಆಶ್ರಯದಲ್ಲಿ ಮಾನವ ಹಕ್ಕುಗಳ ದಿನಾಚರಣೆ ಅಂಗವಾಗಿ ವಿಶೇಷ ಉಪನ್ಯಾಸ ಕಾರ್ಯಕ್ರಮ ಆಯೋಜಿಸಲಾಯಿತು.  


ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ರಾಜ್ಯಶಾಸ್ತ್ರ ವಿಭಾಗ ಮುಖ್ಯಸ್ಥ ಪ್ರಶಾಂತ್ ನೀಲಾವರ ಮಾನವ ಹಕ್ಕುಗಳ ಪರಿಕಲ್ಪನೆಯ ಉಗಮ ಬೆಳವಣಿಗೆಗಳ ಜೊತೆಗೆ ಮಾನವ ಹಕ್ಕುಗಳ ಉಲ್ಲಂಘನೆಯ ನಿದರ್ಶನಗಳನ್ನು ಪ್ರಸ್ತುತಪಡಿಸಿದರು.  ಪಾಶ್ಚಿಮಾತ್ಯರ ವ್ಯಕ್ತಿಗತವಾದ ಹಕ್ಕುಗಳ ಮತ್ತು ಪೌರಾತ್ಯದ ಸಾಮುದಾಯಿಕ ಹಕ್ಕುಗಳ ಮಹತ್ವವನ್ನು ಪಾಶ್ಚಿಮಾತ್ಯ ಮತ್ತು ಪೌರಾತ್ಯ ಚಿಂತಕರ ಚಿಂತನೆಗಳ ಮೂಲಕ ಪ್ರಸ್ತುತ ಪಡಿಸಿದರು.  


ಮುಖ್ಯ ಅತಿಥಿಗಳಾಗಿ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ವಿಶ್ವನಾಥ ಕಡಬ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡುತ್ತಾ ಮಾನವ ಹಕ್ಕುಗಳ ಬಗ್ಗೆ ಜಾಗೃತಿಯ ಜೊತೆಗೆ ಅದರಂತೆ ಬದುಕಬೇಕೆಂದರು.  ಅಧ್ಯಕ್ಷತೆ ವಹಿಸಿದ ಪ್ರಾಂಶುಪಾಲ ನಿತ್ಯಾನಂದ ವಿ. ಗಾಂವಕರ ಮಾನವ ಹಕ್ಕುಗಳ ಜಾಗೃತಿ ಮೂಡಿಸಲು ಯುವಜನತೆ ಸಕ್ರೀಯರಾಗಬೇಕೆಂದರು.  


ಸ್ನಾತಕೋತ್ತರ ವಿಭಾಗದ ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ ಡಾ. ರಘು ನಾಯ್ಕ, ಐಕ್ಯೂಎಸಿ ಸಂಚಾಲಕ ಡಾ. ಮೇವಿ ಮಿರಾಂದ, ಎಂ.ಎಸ್.ಡಬ್ಲ್ಯೂ. ಮುಖ್ಯಸ್ಥೆ ಸುಷ್ಮಾ ಟಿ., ಶೈಕ್ಷಣಿಕ ಸಲಹೆಗಾರ ಡಾ. ಶ್ರೀಧರ ಭಟ್,  ರವಿ ಎಸ್,  ರಾಜೇಂದ್ರ ಮೊಗವೀರ, ಡಾ. ಪ್ರಮೀಳಾ ಜೆ. ವಾಸ್, ಕು. ಸುಮತಿ ಬಿಲ್ಲವ,  ಅಮಿತಾ ಇನ್ನಿತರರು ಉಪಸ್ಥಿತರಿದ್ದರು.  ಎಂ.ಎಸ್.ಡಬ್ಲ್ಯೂ. ವಿದ್ಯಾರ್ಥಿಗಳಾದ ಶಿವಾನಿ ಸ್ವಾಗತಿಸಿದರೆ, ಗೌತಮಿ ವಂದಿಸಿದರು.  ಮಹಮ್ಮದ್ ಸುಹಾದ್ ವಿಶ್ವ ಮಾನವ ಹಕ್ಕುಗಳ ಘೋಷಣೆಯ ವಿಧಿಗಳನ್ನು ವಾಚಿಸಿದರು.  ಯಶಸ್ವಿನಿ ಕಾರ್ಯಕ್ರಮ ನಿರೂಪಿಸಿದರು. 



 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top