ಬೆಂಗಳೂರು: ‘ಭಾರತ ದೇಶ ತಂತ್ರಜ್ಞಾನ ಕ್ಷೇತ್ರದಲ್ಲಿ ಅತ್ಯಂತ ಬಲಯುತವಾದ ಹಾಗೂ ಗುಣಮಟ್ಟದ ಮಾನವ ಸಂಪನ್ಮೂಲ ಹೊಂದಿರುವ ಜಗತ್ತಿನ ಮೂರನೇ ರಾಷ್ಟ್ರ ಎಂದು ಖ್ಯಾತಿ ಪಡೆದಿದೆ. ನಮ್ಮ ತಂತ್ರಜ್ಞಾನದ ವಿದ್ಯಾರ್ಥಿಗಳು ಮುಂದೆ ತಮ್ಮದೇ ಆದ ಉದ್ಯಮಗಳನ್ನು ಸ್ಥಾಪಿಸಿ ದೇಶವನ್ನು ಮುನ್ನಡೆಸಬೇಕು ಎಂಬುದು ‘ಇಂಡಿಯನ್ ಸೊಸೈಟಿ ಫಾರ್ ಟೆಕ್ನಿಕಲ್ ಎಜುಕೇಶನ್ (ಐ.ಎಸ್.ಟಿ.ಇ) ನ ಮಹದೋದ್ದೇಶ– ಅದರಿಂದಲೇ ಐ.ಎಸ್.ಟಿ.ಇ ದೇಶದ ತಾಂತ್ರಿಕ ಮಹಾವಿದ್ಯಾಲಯಗಳ ಜತೆಗೂಡಿ ಈ ನಿಟ್ಟಿನಲ್ಲಿ ಅನೇಕ ಕಾರ್ಯಕ್ರಮಗಳನ್ನು ಹಾಗೂ ಶಿಬಿರಗಳನ್ನು ಆಯೋಜಿಸುತ್ತಿದೆ. ವಿದ್ಯಾರ್ಥಿಗಳ ಬಲ ಸಂವರ್ಧನೆ ಮಾಡುವುದಷ್ಟೇ ಅಲ್ಲ, ಶಿಕ್ಷಕರ ಅರಿವನ್ನೂ ಹೆಚ್ಚಿಸಲು ಐ.ಎಸ್.ಟಿ.ಇ ನಿರತವಾಗಿದೆ. ಕೈಗಾರಿಕೆಗಳು ಹಾಗೂ ಶಿಕ್ಷಣ ಸಂಸ್ಥೆಗಳು ಒಟ್ಟಾಗಿ ಹೆಜ್ಜೆ ಇಡಲಿ ಎಂಬುದು ನಮ್ಮ ಉದ್ದೇಶ’ ಎಂದು ಇಂಡಿಯನ್ ಸೊಸೈಟಿ ಫಾರ್ ಟೆಕ್ನಿಕಲ್ ಎಜುಕೇಶನ್ (ಐ.ಎಸ್.ಟಿ.ಇ)ನ ಕರ್ನಾಟಕ ಪ್ರಾಂತೀಯ ಅಧ್ಯಕ್ಷ ಡಾ. ಡಿ.ಎಸ್. ಸುರೇಶ್ ಅವರು ನುಡಿದರು.
ಅವರು ನಿಟ್ಟೆ ಮೀನಾಕ್ಷಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಐ.ಎಸ್.ಟಿ.ಇ ವಿದ್ಯಾರ್ಥಿ ಶಾಖೆಯನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ‘ಶಿಕ್ಷಣ ಸಂಸ್ಥೆಗಳು ನೀಡುವ ಶಿಕ್ಷಣ ಪರಿಪೂರ್ಣವಾಗುವುದೇ ಪರಿಣಾಮಕಾರಿ ಸಂಶೋಧನೆ ಹಾಗೂ ಅನ್ವೇಷಣೆಗಳಿಗೆ ಆದ್ಯತೆ ನೀಡಿದಾಗ ಮಾತ್ರ’, ಎಂದರು.
ನಿಟ್ಟೆ ಮೀನಾಕ್ಷಿ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ಹೆಚ್.ಸಿ. ನಾಗರಾಜ್ ಅವರು ಪ್ರಾರಂಭದಲ್ಲಿ ಸರ್ವರನ್ನು ಸ್ವಾಗತಿಸಿದರು. ಸಮಾರಂಭದಲ್ಲಿ ಐ.ಎಸ್.ಟಿ.ಇ. ವಿಶ್ರಾಂತ ರಾಷ್ಟ್ರೀಯ ಅಧ್ಯಕ್ಷ ಪ್ರೊ. ಎನ್.ಆರ್. ಶೆಟ್ಟಿ; ನಿಟ್ಟೆ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ರೋಹಿತ್ ಪೂಂಜ; ಐ.ಎಸ್.ಟಿ.ಇ. ರಾಷ್ಟ್ರೀಯ ಕಾರ್ಯನಿರ್ವಾಹಕ ಮಂಡಳಿಯ ಸದಸ್ಯ ಡಾ. ಎಸ್.ಬಿ. ಸಂಗಪ್ಪ, ನಿಟ್ಟೆ ಶಿಕ್ಷಣ ಸಂಸ್ಥೆಯ ಅಕಾಡೆಮಿಕ್ ನಿರ್ದೇಶಕ ಡಾ. ಸಂದೀಪ್ ಶಾಸ್ತ್ರಿ, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ