ಡಿ.14-15: ಎಸ್‌ಡಿಎಂ ಕಾನೂನು ಕಾಲೇಜಿನಲ್ಲಿ ಸುವರ್ಣ ಮಹೋತ್ಸವ ಸಂಭ್ರಮ

Upayuktha
0


ಮಂಗಳೂರು: ನಗರದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾನೂನು ಕಾಲೇಜಿನ ಸುವರ್ಣ ಮಹೋತ್ಸವದ ಸಂಭ್ರಮವು ಡಿ.14 ಮತ್ತು 15 ರಂದು ನಗರದ ಟಿ.ಎಂ.ಎ. ಪೈ ಸಭಾಂಗಣದಲ್ಲಿ ನಡೆಯಲಿದೆ ಎಂದು ಕಾಲೇಜ್ ಪ್ರಾಂಶುಪಾಲ ತಾರಾನಾಥ್ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು. 

ದಿನಾಂಕ 14ರಂದು ಸ್ಥಾಪಕರ ದಿನಾಚರಣೆ ನಡೆಯಲಿದೆ. ಕೇರಳ ಉಚ್ಛ ನ್ಯಾಯಾಲಯದ ನ್ಯಾಯಾಧೀಶ, ಎಸ್.ಡಿ. ಎಂ. ಕಾನೂನು ಕಾಲೇಜಿನ ಪೂರ್ವ ವಿದ್ಯಾರ್ಥಿ ನ್ಯಾ. ಮುರಳೀ ಕೃಷ್ಣ ಕಾಠ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಉಪಸ್ಥಿತಿಯಲ್ಲಿ ಕರ್ನಾಟಕ ರಾಜ್ಯ ಕಾನೂನು ಮಹಾವಿದ್ಯಾಲಯದ ಕುಲಪತಿ ಪ್ರೊ. (ಡಾ) ಬಸವರಾಜು ಸಭಾಧ್ಯಕ್ಷತೆ ವಹಿಸಲಿದ್ದು, ಕರ್ನಾಟಕ ಉಚ್ಚ ನ್ಯಾಯಾಲಯದ ಹಿರಿಯ ನ್ಯಾಯವಾದಿ ಉದಯ ಹೊಳ್ಳ ಪ್ರಧಾನ ಭಾಷಣ ಮಾಡಲಿದ್ದಾರೆ.


ಭಾರತದ ಸರ್ವೋಚ್ಛ ನ್ಯಾಯಾಲಯದ ಹಿರಿಯ ನ್ಯಾಯವಾದಿ, ಕಾಲೇಜಿನ ಪೂರ್ವ ವಿದ್ಯಾರ್ಥಿ ರೋಹಿತ್ ರಾವ್ ವಸ್ತು ಪ್ರದರ್ಶನವನ್ನು ಉದ್ಘಾಟಿಸಲಿದ್ದಾರೆ. ತಮಿಳು ನಾಡಿನ ರಾಷ್ಟ್ರೀಯ ಕಾನೂನು ಶಾಲೆಯ ಕುಲಪತಿ ಪ್ರೊ. ನಾಗರಾಜ್‌ ಸ್ಥಾಪಕ ದಿನದ ಭಾಷಣ ಮಾಡಲಿದ್ದಾರೆ. ದಿನಾಂಕ 15 ರಂದು ಪೂರ್ವ ವಿದ್ಯಾರ್ಥಿ ಪನರ್‌ ಮಿಲನ ಕಾಠ್ಯಕ್ರಮ ನಡೆಯಲಿದ್ದು ಆಂಧ್ರ ಪ್ರದೇಶದ ರಾಜ್ಯಪಾಲರು, ಕಾಲೇಜಿನ ಪೂರ್ವ ವಿದ್ಯಾರ್ಥಿ ನ್ಯಾ. ಎಸ್. ಅಬ್ದುಲ್ ನಜೀರ್‌ ಸಭಾಧ್ಯಕ್ಷತೆ ವಹಿಸಲಿದ್ದಾರೆ ಎಂದರು. 


ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಘನ ಉಪಸ್ಥಿತಿಯಲ್ಲಿ ನಡೆಯಲಿರುವ ಈ ಕಾಠ್ಯಕ್ರಮದಲ್ಲಿ ಭಾರತ ಸರಕಾರದ ಅಟಾರ್ನಿ ಜನರಲ್ ಡಾ. ಆರ್ ವೆಂಕಟ್ರಮಣ ಪ್ರಧಾನ ಭಾಷಣ ಮಾಡಲಿದ್ದಾರೆ. ಕರ್ನಾಟಕ ವಿಧಾನ ಸಭೆಯ ಅಧ್ಯಕ್ಷರಾದ ಕಾಲೇಜಿನ ಪೂರ್ವ ವಿದ್ಯಾರ್ಥಿ ಯು.ಟಿ.ಖಾದರ್, ಭಾರತ ಸರಕಾರದ ಹೆಚ್ಚುವರಿ ಸಾಲಿಸಿಟರ್ ಜನರಲ್, ಕಾಲೇಜಿನ ಪೂರ್ವ ವಿದ್ಯಾರ್ಥಿ ಕೆ.ಎಂ. ನಟರಾಜ್‌, ಕರ್ನಾಟಕ ಸರಕಾರದ ಹೆಚ್ಚುವರಿ ಎಡ್ವಕೇಟ್ ಜನರಲ್, ಕಾಲೇಜಿನ ಪೂರ್ವ ವಿದ್ಯಾರ್ಥಿ ಶಾಹುಲ್ ಹಮೀದ್ ರಹಮಾನ್ ಹಾಗೂ ಸರ್ವೊಚ್ಛ ನ್ಯಾಯಾಲಯದ ಹಿರಿಯ ನ್ಯಾಯವಾದಿ, ಕಾಲೇಜಿನ ಹಳೆ ವಿದ್ಯಾರ್ಥಿ ಶೇಖ‌ ದೇವಸ ಮುಖ್ಯ ಅತಿಥಿಗಳಾಗಿರುತ್ತಾರೆ. ಉಭಯ ದಿನಗಳಂದು ಪೂರ್ವಾಹ್ನ ಗಂಟೆ 10ಕ್ಕೆ ಆರಂಭಗೊಳ್ಳುವ ಈ ಕಾಠ್ಯಕ್ರಮ ಯಕ್ಷಗಾನವೂ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರಕ್ರಮಗಳೊಂದಿಗೆ ವೈಭವೋಪೇತವಾಗಿ ನಡೆಯಲಿದೆ ಎಂದು ಮಾಹಿತಿ ನೀಡಿದರು.


ಪತ್ರಿಕಾಗೋಷ್ಟಿಯಲ್ಲಿ ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ದೇವರಾಜ್ ಕೆ, ಪುರುಷೋತ್ತಮ್ ಭಟ್, ಡಾ.ಬಾಲಿಕ, ಸತ್ಯಾತ್ಮ ಮತ್ತಿತರರು ಉಪಸ್ಥಿತರಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top