ತೆಂಕನಿಡಿಯೂರು: ಮಂಗಳೂರು ವಿ.ವಿ. ಅಂತರ್‌ ಕಾಲೇಜು ಅಥ್ಲೆಟಿಕ್ಸ್ ಕ್ರೀಡಾಕೂಟ

Upayuktha
0


ತೆಂಕನಿಡಿಯೂರು: ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಡುಪಿ, ಲಯನ್ಸ್‌ ಕ್ಲಬ್‌ ಅಮೃತ್ ಮತ್ತು ಲಿಯೋ ಡಿಸ್ಟ್ರಿಕ್ಟ್ 317ಸಿ ಹಾಗೂ ಜಿಲ್ಲಾ ಪಂಚಾಯತ್‌ ಉಡುಪಿ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ ಮಂಗಳೂರು ವಿ.ವಿ. ಮಟ್ಟದ ಪುರುಷರ ಮತ್ತು ಮಹಿಳೆಯರ ಅಂತರ್‌ ಕಾಲೇಜು ಅತ್ಲೆಟಿಕ್ಸ್‌ ಕ್ರೀಡಾಕೂಟ ಉದ್ಘಾಟಿಸಿದ ಉಡುಪಿ ಶಾಸಕರಾದ ಯಶಪಾಲ್ ಎ. ಸುವರ್ಣಕ್ರೀಡೆ, ಸಾಂಸ್ಕೃತಿಕ ಮತ್ತು ಶೈಕ್ಷಣಿಕ ಸಾಧನೆಯ ಹಾದಿಯಲ್ಲಿ ಸಾಗುತ್ತಿರುವ ತೆಂಕನಿಡಿಯೂರು ಕಾಲೇಜನ್ನು ಶ್ಲಾಘಿಸುತ್ತಾ ಕ್ರೀಡೆ ನಮ್ಮ ದೈಹಿಕ ಕ್ಷಮತೆಯನ್ನೇ ಅಲ್ಲ ಮನೋಬಲವನ್ನು ಹೆಚ್ಚಿಸುತ್ತದೆ.  


ಯುವಜನತೆ ಕ್ರೀಡೆಯಲ್ಲಿ ತೊಡಗಿಸಿಕೊಂಡು ಸಕಾರಾತ್ಮಕವಾಗಿ ಬೆಳೆದಾಗ ಸಂಸ್ಥೆಗೂ ಸಮಜಕ್ಕೂ ಶ್ರೇಯಸ್ಸು ಎಂದರು.  ಮುಖ್ಯ ಅತಿಥಿಗಳಾಗಿ ಉಡುಪಿ ಜಿಲ್ಲಾಅತ್ಲೆಟಿಕ್ ಫೆಡರೇಶನ್‌ ಅಧ್ಯಕ್ಷ  ಹರಿಪ್ರಸಾದ್‌ ರೈ, ಕ್ರೀಡಾಕೂಟಕ್ಕೆ ಶುಭ ಹಾರೈಸುತ್ತಾ ಕ್ರೀಡಾ ಮನೋಭಾವನೆಯಿಂದ ಸ್ಪರ್ಧಿಸುವಂತೆ ಕ್ರೀಡಾಪಟುಗಳಿಗೆ ಸೂಚಿಸಿದರು. 


ಮಂಗಳೂರು ವಿ.ವಿ. ದೈಹಿಕ ಶಿಕ್ಷಣ ನಿರ್ದೇಶಕ ಡಾ. ಜೆರಾಲ್ಡ್ ಸಂತೋಷ್ ಡಿ’ಸೋಜ, ಕೈಗಾರಿಕೋದ್ಯಮಿ ಶ್ರೀ ಆನಂದ ಸುವರ್ಣ, ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ನಿತ್ಯಾನಂದ ವಿ. ಗಾಂವಕರ, ಡಾ. ಕೆ. ರಾಮಚಂದ್ರ, ಕಾಲೇಜಿನ ಶೈಕ್ಷಣಿಕ ಸಲಹೆಗಾರರಾದಡಾ. ಶ್ರೀಧರ್ ಭಟ್ ಮತ್ತಿತರರು ಉಪಸ್ಥಿತರಿದ್ದರು.  ಕ್ರೀಡಾಕೂಟ ಆಯೋಜಕ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಹಾಗೂ ಯುವ ಸಬಲೀಕರಣ ಕ್ರೀಡಾ ಇಲಾಖೆಯ ಡಾ. ರೋಶನ್‌ಕುಮಾರ್ ಶೆಟ್ಟಿಕಾರ್ಯಕ್ರಮ ನಿರ್ವಹಿಸಿದರೆ.  ಪದವಿ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ  ಪ್ರಶಾಂತ ಎನ್. ವಂದನಾರ್ಪಣೆಗೈದರು.




  ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top