ಮೂಡಂಬೈಲ್ ರವಿ ಶೆಟ್ಟಿ ಅವರಿಗೆ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಸನ್ಮಾನ

Chandrashekhara Kulamarva
0


ಪುತ್ತೂರು: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ, ಖತಾರ್ ಕನ್ನಡ ಸಂಘದ ಅಧ್ಯಕ್ಷರೂ ಆಗಿರುವ ಸಮಾಜ ಸೇವಕ ಪುತ್ತೂರಿನ ಹೆಮ್ಮೆಯ ಉದ್ಯಮಿ ಮೂಡಂಬೈಲ್ ರವಿ ಶೆಟ್ಟಿ ಕತಾರ್ ಅವರಿಗೆ ವಿದೇಶದಲ್ಲಿ ಕನ್ನಡಪರ ಸಂಘಟನೆಗಾಗಿ ಡಿಸೆಂಬರ್ 20ರಂದು ಮಂಡ್ಯದಲ್ಲಿ ನಡೆಯುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕರ್ನಾಟಕ ಸುವರ್ಣ ಮಹೋತ್ಸವದ ಸವಿನೆನಪಿನಲ್ಲಿ ಸನ್ಮಾನ ನಡೆಯಲಿದೆ.  


ಆಂಧ್ರಪ್ರದೇಶದ ರಾಜ್ಯಪಾಲ ಎಸ್ ಅಬ್ದುಲ್ ನಜೀರ್ ಅವರು ಸನ್ಮಾನಿಸಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ, ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ. ಮಹೇಶ್ ಜೋಶಿ ಮುಂತಾದ ಗಣ್ಯರು ಉಪಸ್ಥಿತರಿರಲಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top