ಮಾಳದಲ್ಲಿ ನಿಟ್ಟೆ ತಾಂತ್ರಿಕ ಕಾಲೇಜಿನ ಎನ್ನೆಸ್ಸೆಸ್ ಶಿಬಿರ- ಡಿ.24ರಿಂದ 30ರ ವರೆಗೆ

Upayuktha
0

 


ಕಾರ್ಕಳ: ನಿಟ್ಟೆಯ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಎನ್ಎಸ್ಎಸ್ ವಿದ್ಯಾರ್ಥಿಗಳ ವಾರ್ಷಿಕ ವಿಶೇಷ ಶಿಬಿರವು ಡಿ.24ರಿಂದ 30ರವರೆಗೆ ಮಾಳದ ಶ್ರೀ ಗುರುಕುಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿದ್ದು, ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್ ಡಿ.24 ರಂದು ಉದ್ಘಾಟಿಸಿದರು. ತಮ್ಮ ಉದ್ಘಾಟನಾ ಭಾಷಣದಲ್ಲಿ ಅವರು ಹಳ್ಳಿಯ ಜೀವನ ಮತ್ತು ಶಿಬಿರದ ಮಹತ್ವವನ್ನು ವಿವರಿಸಿದರು.


ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ನಿಟ್ಟೆ ತಾಂತ್ರಿಕ ಕಾಲೇಜಿನ ಪ್ರಾಂಶುಪಾಲ ಡಾ.ನಿರಂಜನ್ ಎನ್.ಚಿಪ್ಲುಂಕರ್ ಅವರು ಶಿಬಿರದ ಚಟುವಟಿಕೆಗಳಲ್ಲಿ ಭಾಗವಹಿಸುವ ಮಹತ್ವದ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು.


ಕಾರ್ಯಕ್ರಮದಲ್ಲಿ ಗುರುಕುಲ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಗಜಾನನ ಮರಾಟೆ, ಕಾರ್ಕಳ ಬಿಇಒ ಭಾಸ್ಕರ್ ಟಿ., ಶಾಲಾ ಮುಖ್ಯ ಶಿಕ್ಷಕಿ ಪೂರ್ಣಿಮಾ ಶೆಣೈ, ಮಾಳ ಗ್ರಾಮ ಪಂಚಾಯಿತಿ ಅಧ್ಯಕ್ಷ ಉಮೇಶ್ ಪೂಜಾರಿ, ಎನ್.ಎಸ್.ಎಸ್ ಅಧಿಕಾರಿ ಶ್ರೀನಿವಾಸ ನೆಕ್ಕಾರ್ ಉಪಸ್ಥಿತರಿದ್ದರು.


  ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top