ಕಾರ್ಕಳ: ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದಲ್ಲಿ ನಡೆದ ವಿಟಿಯು ಅಂತರ ಕಾಲೇಜು ಮಂಗಳೂರು ವಿಭಾಗದ ಹ್ಯಾಂಡ್ಬಾಲ್ ಸ್ಪರ್ಧೆಯಲ್ಲಿ ನಿಟ್ಟೆ ತಾಂತ್ರಿಕ ಕಾಲೇಜಿನ ಪುರುಷರ ಹ್ಯಾಂಡ್ಬಾಲ್ ತಂಡವು ಚಾಂಪಿಯನ್ಶಿಪ್ ಟ್ರೋಫಿಯನ್ನು ಗೆದ್ದುಕೊಂಡಿತು.
ಮಂಗಳೂರಿನ ಸಹ್ಯಾದ್ರಿ ಕಾಲೇಜ್ ಆಫ್ ಇಂಜಿನಿಯರಿಂಗ್ ಅಂಡ್ ಮ್ಯಾನೇಜ್ ಮೆಂಟ್ ರನ್ನರ್ ಅಪ್ ಸ್ಥಾನ ಪಡೆಯಿತು. ಪಂದ್ಯಾವಳಿಯನ್ನು ಮಾಜಿ ರಾಷ್ಟ್ರೀಯ ಹ್ಯಾಂಡ್ಬಾಲ್ ಆಟಗಾರ ಮತ್ತು ನಿಟ್ಟೆ ತಾಂತ್ರಿಕ ಕಾಲೇಜಿನ ಹಳೆಯ ವಿದ್ಯಾರ್ಥಿ ಶಂತನು ಎಸ್ ಶೆಟ್ಟಿ ಉದ್ಘಾಟಿಸಿದರು.
ನಿಟ್ಟೆ ತಾಂತ್ರಿಕ ಕಾಲೇಜಿನ ಪ್ರಾಂಶುಪಾಲ ಡಾ.ನಿರಂಜನ್ ಎನ್.ಚಿಪ್ಲುಂಕರ್ ಅಧ್ಯಕ್ಷತೆ ವಹಿಸಿದ್ದರು. ಬಹುಮಾನ ವಿತರಣಾ ಸಮಾರಂಭದಲ್ಲಿ ಎನ್.ಇ.ಟಿ ಕ್ಯಾಂಪಸ್ ನ ಕ್ರೀಡಾ ಆಡಳಿತಾಧಿಕಾರಿ ಶ್ಯಾಮ್ ಸುಂದರ್ ಎಂ ಮತ್ತು ನಿಟ್ಟೆಯ ಡಾ.ಎನ್.ಎಸ್.ಎ.ಎಂ ಪದವಿಪೂರ್ವ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ರವೀಂದ್ರ ಕುಮಾರ್ ವಿಜೇತರು ಮತ್ತು ರನ್ನರ್ ಅಪ್ ಗಳಿಗೆ ಟ್ರೋಫಿ ಮತ್ತು ಪ್ರಮಾಣಪತ್ರಗಳನ್ನು ವಿತರಿಸಿದರು.
ದೈಹಿಕ ಶಿಕ್ಷಣ ನಿರ್ದೇಶಕ ಡಾ.ಗಣೇಶ್ ಪೂಜಾರಿ ಮತ್ತು ಸೌಜನ್ಯ ಕಾರ್ಯಕ್ರಮ ಸಂಯೋಜಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ