ನಿಟ್ಟೆ: ಡಾ. ಎನ್‌ಎಸ್‌ಎಎಂ ಪ್ರಥಮ ದರ್ಜೆ ಕಾಲೇಜು, ನಿಟ್ಟೆಯ NSS ವಾರ್ಷಿಕ ವಿಶೇಷ ಶಿಬಿರದ ಪ್ರಯುಕ್ತ "ಬೃಹತ್ ಅರೋಗ್ಯ ತಪಾಸಣಾ ಶಿಬಿರ" ಗುರುವಾರ (ಡಿ.27) ನೆರವೇರಿತು. ಇದರಲ್ಲಿ ಎ.ಬಿ.ಶೆಟ್ಟಿ ಸ್ಮಾರಕ ದಂತ ವಿಜ್ಞಾನ ಸಂಸ್ಥೆ, ದೇರಳಕಟ್ಟೆ, ಮಂಗಳೂರು; ಪ್ರಸಾದ್ ನೇತ್ರಾಲಯ ಉಡುಪಿ, ಪ್ರಾಥಮಿಕ ಆರೋಗ್ಯ ಕೇಂದ್ರ ದೊಂಡೇರಂಗಡಿ, NCD ಘಟಕ- ಸಮುದಾಯ ಆರೋಗ್ಯ ಕೇಂದ್ರ, ಹೆಬ್ರಿ- ಇವುಗಳು ಭಾಗವಹಿಸಿದ್ದವು.
ಶಿಬಿರದಲ್ಲಿ ಉಚಿತ ದಂತ ತಪಾಸಣೆ ಮತ್ತು ಚಿಕಿತ್ಸೆಯನ್ನು 91 ಮಂದಿ ಸದುಪಯೋಗ ಪಡಿಸಿಕೊಂಡರು. 84 ಜನರ ನೇತ್ರ ತಪಾಸಣೆ, 82 ಜನರ ಅರೋಗ್ಯ ತಪಾಸಣೆ ಮಾಡಲಾಗಿತ್ತು.
ಈ ಶಿಬಿರಕ್ಕೆ ಶ್ರೀ ಲಕ್ಷ್ಮಿ ಜನಾರ್ದನ ದೇವಸ್ಥಾನ ಎಳ್ಳಾರೆ, ಶ್ರೀ ರಾಮ ಮಂದಿರ ದೊಂಡೇರಂಗಡಿ, ಹಿಂದೂ ಹೆಲ್ಪ್ ಲೈನ್ ಜನಸೇವಾ ಟ್ರಸ್ಟ್,ಮುನಿಯಾಲು, ಭುವಿ ಕ್ಲಿನಿಕಲ್ ಲ್ಯಾಬ್ ಮುನಿಯಾಲು, ಶ್ರೀ ಲಕ್ಷ್ಮೀ ಜನಾರ್ದನ ಭಜನಾ ಮಂಡಳಿ ಎಳ್ಳಾರೆ, ಶ್ರೀ ಜನಾರ್ದನ ಅನುದಾನಿತ ಪ್ರಾಥಮಿಕ ಶಾಲೆ ಎಳ್ಳಾರೆ ಸಹಕಾರ ನೀಡಿದವು. ಸುಮಾರು 150 ಮಂದಿ ಗ್ರಾಮಸ್ಥರು ಈ ಕಾರ್ಯಕ್ರಮದ ಫಲಾನುಭವ ಪಡೆದುಕೊಂಡರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ