ವಿಟಿಯು ಅಂತರ ಕಾಲೇಜು ಕ್ರಿಕೆಟ್ ಪಂದ್ಯಾವಳಿಯಲ್ಲಿ ನಿಟ್ಟೆ ತಂಡ ಚಾಂಪಿಯನ್

Upayuktha
0


ಕಾರ್ಕಳ: ನಿಟ್ಟೆಯ ಬಿ.ಸಿ.ಆಳ್ವ ಸ್ಪೋರ್ಟ್ಸ್ ಕಾಂಪ್ಲೆಕ್ಸ್ ಮೈದಾನದಲ್ಲಿ ನ.20ರಿಂದ 26ರವರೆಗೆ ನಡೆದ ವಿಟಿಯು ಅಂತರ ಕಾಲೇಜು ಮಂಗಳೂರು ವಿಭಾಗ ಕ್ರಿಕೆಟ್ ಪಂದ್ಯಾವಳಿಯಲ್ಲಿ ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಪುರುಷರ ಕ್ರಿಕೆಟ್ ತಂಡವು ಚಾಂಪಿಯನ್ ಶಿಪ್ ಟ್ರೋಫಿಯನ್ನು ತನ್ನದಾಗಿಸಿಕೊಂಡಿದೆ. ಮಂಗಳೂರು ವಿಭಾಗದ ವಿಟಿಯು ಸಂಯೋಜಿತ ಕಾಲೇಜುಗಳಿಂದ ಒಟ್ಟು 18 ತಂಡಗಳು ಭಾಗವಹಿಸಿದ್ದವು.


ಫೈನಲ್ ನಲ್ಲಿ ನಿಟ್ಟೆ ತಾಂತ್ರಿಕ ಕಾಲೇಜಿನ ಕ್ರಿಕೆಟ್ ತಂಡವು ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್ ತಂಡವನ್ನು 4 ರನ್ ಗಳಿಂದ ಸೋಲಿಸಿತು. ಮಂಗಳೂರಿನ ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್ & ಮ್ಯಾನೇಜ್ ಮೆಂಟ್ ರನ್ನರ್ ಅಪ್ ಸ್ಥಾನ ಪಡೆದರೆ, ಮೂಡುಬಿದಿರೆಯ ಎಂಐಟಿಇ ಮತ್ತು ಭಟ್ಕಳದ ಎಐಟಿಎಂ ಕ್ರಮವಾಗಿ 3 ಮತ್ತು 4ನೇ ಸ್ಥಾನಗಳನ್ನು ಪಡೆದುಕೊಂಡಿವೆ. 


ಈ ಪಂದ್ಯಾವಳಿಯ ಮುಂದಿನ ಹಂತವಾಗಿ ವಿಟಿಯು ಅಂತರ ಕಾಲೇಜು ರಾಜ್ಯ ಮಟ್ಟದ ಕ್ರಿಕೆಟ್ ಪುರುಷರ ಪಂದ್ಯಾವಳಿಯು ನ.28ರಿಂದ ಡಿ.2ರವರೆಗೆ ಬಿ.ಸಿ.ಆಳ್ವ ಸ್ಪೋರ್ಟ್ಸ್ ಕಾಂಪ್ಲೆಕ್ಸ್ ಕ್ರಿಕೆಟ್ ಮೈದಾನ ಹಾಗೂ ಸಹ್ಯಾದ್ರಿ ಕಾಲೇಜ್ ಆಫ್ ಇಂಜಿನಿಯರಿಂಗ್ ಮತ್ತು ಮ್ಯಾನೇಜ್ಮೆಂಟ್ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿದೆ. ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯಕ್ಕೆ ಸಂಯೋಜಿತವಾಗಿರುವ ಎಂಟು ವಲಯಗಳ ವಿಜೇತರು ಮತ್ತು ರನ್ನರ್ ಅಪ್ ಗಳು ಸೇರಿದಂತೆ ಒಟ್ಟು 16 ಕ್ರಿಕೆಟ್ ತಂಡಗಳು ಪಂದ್ಯಾವಳಿಗೆ ನೋಂದಾಯಿಸಿ ಭಾಗವಹಿಸುತ್ತಿವೆ.



  ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top