ಕಠಿಣ ದುಡಿಮೆ, ಪರಿಶ್ರಮದಿಂದ ಉತ್ಕೃಷ್ಟ ಸಾಧನೆ: ಡಿ. ವೀರೇಂದ್ರ ಹೆಗ್ಗಡೆ

Chandrashekhara Kulamarva
0

ಉಜಿರೆ: ವಿದ್ಯಾರ್ಥಿಗಳು ತಮ್ಮ ದೈಹಿಕ, ಮಾನಸಿಕ ಆರೋಗ್ಯವನ್ನು ಕಾಪಾಡಿಕೊಂಡು ಕಠಿಣ ಪರಿಶ್ರಮ, ಸಾಧನೆಯ ಅಧ್ಯಯನದಿಂದ ಯಶಸ್ಸಿನ ಪಥದಲ್ಲಿ ಸಾಗಬಹುದು. ಕ್ರೀಡೆ, ಯೋಗ ಮತ್ತಿತರ ಚಟುವಟಿಕೆಗಳಲ್ಲಿ ನಿರಂತರ ತೊಡಗಿಸಿಕೊಳ್ಳುವುದರಿಂದ ದೈಹಿಕ ಕ್ಷಮತೆಯನ್ನು ಹೆಚ್ಚಿಸಿಕೊಂಡು  ಅಧ್ಯಯನದಲ್ಲಿ ಉತೃಷ್ಟ ಸಾಧನೆ ಮಾಡಲು ಸಾಧ್ಯ. ಪ್ರತಿ ವರ್ಷ ಪ್ರತಿ ಶತ ಫಲಿತಾಂಶದಿಂದ ಸಂಸ್ಥೆಗೆ  ಕೀರ್ತಿ ತರುವಂತವರಾಗಬೇಕು ಎಂದು  ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ!ಡಿ. ವೀರೇಂದ್ರ ಹೆಗ್ಗಡೆಯವರು ನುಡಿದರು. 


ಅವರು ಡಿ 17ರಂದು ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಮಹಾವಿದ್ಯಾಲಯದ ವಾರ್ಷಿಕೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಶಿಕ್ಷಣ ಸಂಸ್ಥೆ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಎಲ್ಲ ಅನುಕೂಲತೆ ಕಲ್ಪಿಸಿಕೊಡುತ್ತಿದೆ. ಶಿಕ್ಷಣ, ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳಿಗೆ ಸಮಾನ ಆದ್ಯತೆ ನೀಡುತ್ತಿದೆ. ಇಲ್ಲಿ ಉತ್ತಮ ಶಿಕ್ಷಣ ಪಡೆದ ವಿದ್ಯಾರ್ಥಿಗಳು ಅಮೇರಿಕ ಮುಂತಾದ ಕಡೆಗಳಲ್ಲಿ ಉನ್ನತ ಉದ್ಯೋಗದಲ್ಲಿ ತೊಡಗಿ ಸಂಸ್ಥೆಯ ಕೀರ್ತಿಯನ್ನು ಬೆಳಗಿಸುತ್ತಿದ್ದಾರೆ. ಕಾಲೇಜಿನಿಂದ ಹೊರಬರುತ್ತಲೇ ಕ್ಯಾಂಪಸ್ ಸೆಲೆಕ್ಷನ್ ನಿಂದ ಉತ್ತಮ ಉದ್ಯೋಗಾವಕಾಶಗಳು  ಕಾದಿರುತ್ತವೆ. ಗ್ರಾಮೀಣ ಪ್ರದೇಶದ ಕಾಲೇಜಿನಲ್ಲಿ ಪ್ರತಿ ವರ್ಷ ವಿಶ್ವವಿದ್ಯಾಲಯದ ರ್‍ಯಾಂಕ್‌ಗಳು ವಿದ್ಯಾರ್ಥಿಗಳ ಪಾಲಾಗುತ್ತಿರುವುದು ಹೆಮ್ಮೆಯ ವಿಚಾರ.  ಈ ಬಾರಿ ವಿ.ವಿ.ಯ 9 ನೇ ರ್‍ಯಾಂಕ್ ಪಡೆದ ವಿದ್ಯಾರ್ಥಿ ಹಾಗೂ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ಎಲ್ಲ ವಿದ್ಯಾರ್ಥಿಗಳಿಗೆ ಅಭಿನಂದನೆಗಳು  ಎಂದರು.


ಈ ಸಂದರ್ಭದಲ್ಲಿ ಅವರು ಕಾಲೇಜಿನ ವಿ.ವಿ.ಯ 9ನೇ ರಾಂಕ್ ಪಡೆದ ವಿದ್ಯಾರ್ಥಿ, ಶಿಕ್ಷಣ, ಕ್ರೀಡೆಯಲ್ಲಿ ವಿಶೇಷ ಸಾಧನೆಗೈದ ವಿದ್ಯಾರ್ಥಿಗಳು ಹಾಗು ಮೂವರು ಪಿಎಚ್ ಡಿ ಪಡೆದ ಉಪನ್ಯಾಸಕರನ್ನು ಪುರಸ್ಕರಿಸಿ, ಉಜ್ವಲ ಭವಿಷ್ಯ ಹಾಗೂ ಶ್ರೀ ಮಂಜುನಾಥ ಸ್ವಾಮಿಯ ಅನುಗ್ರಹವಿರಲಿ ಎಂದು ಶುಭ ಹಾರೈಸಿದರು.


ಮಣಿಪಾಲ ಕಾರ್ಮಿಕ್ ಡಿಸೈನ್ ಪ್ರೈ .ಲಿ .ನ ಡೈರೆಕ್ಟರ್ ಮತ್ತು ಚೀಫ್ ಟೆಕ್ನಿಕಲ್ ಆಫೀಸರ್ ಗುರುರಾಜ್ ಬಂಕಾಪುರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಶುಭ ಕೋರಿದರು. ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಡಾ!ಸತೀಶ್ಚಂದ್ರ ಎಸ್., ಕಾರ್ಯಕ್ರಮ ಸಂಯೋಜಕ ಮೆಕ್ಯಾನಿಕಲ್ ವಿಭಾಗದ ಡಾ!ಬಸವ, ಸಿವಿಲ್ ವಿಭಾಗದ ಡಾ.ಕೃಷ್ಣಪ್ರಸಾದ್ ಮತ್ತು ವಿದ್ಯಾರ್ಥಿ ನಾಯಕರು ವೇದಿಕೆಯಲ್ಲಿ ಉಪಸ್ಥಿತರಿದ್ದರು.


ಕಾಲೇಜು ಪ್ರಾಂಶುಪಾಲ ಡಾ! ಅಶೋಕಕುಮಾರ್ ಟಿ. ಕಾಲೇಜಿನ ವಾರ್ಷಿಕ ಚಟುವಟಿಕೆಗಳ ವರದಿ ಮಂಡಿಸಿದರು. ಸಂದೀಪ್ ಸ್ವಾಗತಿಸಿ, ಸಿವಿಲ್ ಎಂಜಿನೀಯರಿಂಗ್ ವಿಭಾಗದ ಶ್ರೀನಿಧಿ ವಂದಿಸಿದರು. ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಪ್ರದರ್ಶಿಸಲ್ಪಟ್ಟಿತು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top