ಪುನರ್ ಪ್ರತಿಷ್ಠೆ, ಬ್ರಹ್ಮಕಲಶೋತ್ಸವದ ಆಮಂತ್ರಣ: ಶಾಸಕ ಡಾ.ಭರತ್ ಶೆಟ್ಟಿ ಅವರಿಂದ ಬಿಡುಗಡೆ

Upayuktha
0


ಚಿತ್ರಾಪುರ: ಸುಮಾರು 2.5 ಕೋಟಿ ರೂಪಾಯಿ ವೆಚ್ಚದಲ್ಲಿ ಸಮಗ್ರವಾಗಿ ಜೀರ್ಣೋದ್ಧಾರಗೊಂಡ ಶ್ರೀ ಕೃಷ್ಣ ಬಾಲಾಂಜನೇಯ ಮಂದಿರ ಹಾಗೂ ಬೊಬ್ಬರ್ಯ ಬಂಟ ದೈವದ ಧರ್ಮ ಚಾವಡಿ, ರಂಗ ಮಂದಿರದ ಉದ್ಘಾಟನೆ ಮತ್ತು ದೇವರ ಪುನರ್ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆಯನ್ನು ಮಂದಿರದ ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷ, ಶಾಸಕ ಡಾ. ಭರತ್ ಶೆಟ್ಟಿ ಅವರು ಗುರುವಾರ ಚಿತ್ರಾಪುರ ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನದಲ್ಲಿ ನೆರವೇರಿಸಿದರು.


ಚಿತ್ರಾಪುರ ಮಠಾಧೀಶರಾದ ಶ್ರೀಶ್ರೀಶ್ರೀ ವಿದ್ಯೇಂದ್ರ ತೀರ್ಥ ಶ್ರೀಪಾದರು ದಿವ್ಯ ಉಪಸ್ಥಿತರಿದ್ದು ಆಶೀರ್ವಚನ ನೆರವೇರಿಸಿದರು.


ದ.ಕ ಮಹಾಜನ ಸಂಘದ ಮಾಜಿ ಅಧ್ಯಕ್ಷ ಗಂಗಾಧರ್ ಹೊಸಬೆಟ್ಟು, ತಣ್ಣೀರುಬಾವಿ ಮೊಗವೀರ ಮಹಾಸಭಾದ ಅಧ್ಯಕ್ಷ ಲೀಲಾಧರ್ ಕರ್ಕೇರ, ಪ್ರಧಾನ ಕಾರ್ಯದರ್ಶಿ ಗಿರೀಶ್ ಕರ್ಕೇರ, ಕೋಶಾಧಿಕಾರಿ ಭುಜಂಗ ಕೋಟ್ಯಾನ್, ಹೊಸಬೆಟ್ಟು ಗ್ರಾಮದ ಅಧ್ಯಕ್ಷ ಯೋಗೀಶ್ ಕರ್ಕೇರ, ಕೂಳೂರು ಮೊಗವೀರ ಮಹಾಸಭಾದ ಅಧ್ಯಕ್ಷ ಭರತ್ ಕುಮಾರ್, ಉಮೇಶ್ ಟಿ ಕರ್ಕೇರ, ಮತ್ಸ್ಯರಾಜ್, ರಾಜೀವ್ ಕಾಂಚನ್, ಸುರೇಂದ್ರ ಬಂಗೇರ, ವಿಶ್ವನಾಥ್ ಕರ್ಕೇರ, ಶರತ್ ಬಂಗೇರ, ಮಾಧವ ಪುತ್ರನ್ ಮತ್ತಿತರ ಪ್ರಮುಖರು ಉಪ್ಥಿತರಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top