ಪುತ್ತೂರು: ವಿವೇಕಾನಂದ ಪದವಿಪೂರ್ವ ಕಾಲೇಜಿನ ವೈದೇಹಿ ಸಭಾಂಗಣದಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳ ಪೋಷಕರ ಸಭೆ ನಡೆಯಿತು.
ಪರೀಕ್ಷಾ ಸಮಯ ಸಮೀಪಿಸುತ್ತಿರುವ ಸಂದರ್ಭದಲ್ಲಿ ಹಲವು ವಿದ್ಯಾರ್ಥಿಗಳು ಎದುರಿಸುತ್ತಿರುವ ವಿವಿಧ ಗೊಂದಲಗಳನ್ನು ಪರಿಹರಿಸಿ, ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡುವ ನಿಟ್ಟಿನಲ್ಲಿ ನಡೆಸಲಾದ ಈ ಸಭೆಯಲ್ಲಿ ಮುಖ್ಯವಾಗಿ ಮುಂಬರುವ ಪೂರ್ವ ಸಿದ್ಧತಾ ಪರೀಕ್ಷೆಗಳು, ಪ್ರಾಯೋಗಿಕ ಪರೀಕ್ಷೆಗಳು ಹಾಗೂ ವಾರ್ಷಿಕ ಪರೀಕ್ಷೆಗಳ ವೇಳಾಪಟ್ಟಿ ಹಾಗೂ ನಿಯಮಾವಳಿಗಳು, ಅದಕ್ಕಾಗಿ ವಿದ್ಯಾರ್ಥಿಗಳು ಮಾಡಬೇಕಾದ ತಯಾರಿಗಳ ಬಗ್ಗೆ ಹಲವು ಮಾಹಿತಿಗಳನ್ನು ಪೋಷಕರಿಗೆ ನೀಡಲಾಯಿತು.
ಗಣಿತಶಾಸ್ತ್ರ ವಿಭಾಗದ ಮುಖ್ಯಸ್ಥೆಯಾದ ಕವಿತಾ ಪರೀಕ್ಷಾ ತಯಾರಿಗಳ ಬಗ್ಗೆ, ಪ್ರಶ್ನೆ ಪತ್ರಿಕಾ ಮಾದರಿಯಲ್ಲಿನ ಬದಲಾವಣೆಗಳು, ಪರೀಕ್ಷಾ ವೇಳಾಪಟ್ಟಿಯ ಬಗ್ಗೆ ಮಾಹಿತಿ ನೀಡಿದರು.
ಹಲವು ಸ್ಪರ್ಧಾತ್ಮಕ ಪರೀಕ್ಷೆಗಳಾದ ಜೆ.ಇ.ಇ, ನೀಟ್, ಸಿ.ಇ.ಟಿ ಪರೀಕ್ಷೆಗಳಿಗೆ ಅರ್ಜಿ ಸಲ್ಲಿಸುವ ವಿಧಾನ, ಅಗತ್ಯವಿರುವ ದಾಖಲೆಗಳು ಹಾಗೂ ಪರೀಕ್ಷೆಗಳಿಗಾಗಿ ವಿದ್ಯಾರ್ಥಿಗಳುಮಾಡಬೇಕಾದ ತಯಾರಿಗಳ ಕುರಿತಾಗಿವಿವರವಾದ ಮಾಹಿತಿಯನ್ನು ಕಾಲೇಜಿನ ಸ್ಪರ್ಧಾತ್ಮಕ ಪರೀಕ್ಷೆಗಳಸಂಯೋಜಕರಾದ ಭೀಮ ಭಾರದ್ವಾಜ್ ನೀಡಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಉಪಪ್ರಾಂಶುಪಾಲ ದೇವಿಚರಣ್ ರೈ, ಉಪನ್ಯಾಸಕ ವೃಂದದವರು, ವಿದ್ಯಾರ್ಥಿಗಳ ಪೋಷಕರು ಪಾಲ್ಗೊಂಡರು.
ಕಾಲೇಜಿನ ಪ್ರಾಂಶುಪಾಲ ಮಹೇಶ್ ನಿಟಿಲಾಪುರ ಪ್ರಾಸ್ತಾವಿಕ ನುಡಿಗಳೊಂದಿಗೆ ಸ್ವಾಗತಿಸಿದರು. ಗಣಿತಶಾಸ್ತ್ರ ವಿಭಾಗದ ಉಪನ್ಯಾಸಕಿ ಶರ್ಮಿಳಾ ಕೆ.ಎಂ ನಿರೂಪಿಸಿ ವಂದಿಸಿದರು. ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯರು ಪ್ರಾರ್ಥಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ