ಡಿ.10-11: ಎಸ್‌ಡಿಎಂ ಪಿಯು ಕಾಲೇಜಿನ ವಾರ್ಷಿಕೋತ್ಸವ

Upayuktha
0


ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭ ಡಿ.10 ಹಾಗೂ 11 ರಂದು ಇಂದ್ರಪ್ರಸ್ಥ ಸಭಾಂಗಣದಲ್ಲಿ ಜರುಗಲಿದೆ.


ಡಿ.10 ರಂದು ಮಧ್ಯಾಹ್ನ 2.30 ಘಂಟೆಗೆ ವಾರ್ಷಿಕೋತ್ಸವ ಪುರಸ್ಕಾರ ಸಮಾರಂಭ ನಡೆಯಲಿದೆ. ಉಜಿರೆಯ ಶ್ರೀ ಜನಾರ್ದನ ದೇವಸ್ಥಾನದ ಅನುವಂಶಿಕ ಧರ್ಮದರ್ಶಿ ಶರತ್ ಕೃಷ್ಣ ಪಡ್ವೆಟ್ನಾಯ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ಪ್ರಾಚಾರ್ಯ ಡಾ. ಬಿ. ಎ. ಕುಮಾರ ಹೆಗ್ಡೆ ಅಭ್ಯಾಗತರಾಗಿ ಭಾಗವಹಿಸಲಿದ್ದಾರೆ. ಪ್ರಾಚಾರ್ಯ ಪ್ರಮೋದ್ ಕುಮಾರ್ ಬಿ ಅಧ್ಯಕ್ಷತೆ ವಹಿಸಲಿದ್ದಾರೆ. 


ಡಿ.11 ರಂದು ಬೆಳಗ್ಗೆ 11 ಘಂಟೆಗೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್ ಅವರ ಅಧ್ಯಕ್ಷತೆಯಲ್ಲಿ 'ಆರೋಹಣಮ್' ವಾರ್ಷಿಕೋತ್ಸವ ಸಮಾರಂಭ ನಡೆಯಲಿದ್ದು ಅಂದು ಚಲನಚಿತ್ರ ಹಾಗೂ ಧಾರಾವಾಹಿಯ ಖ್ಯಾತ ನಟಿ ಅನ್ವಿತಾ ಸಾಗರ್ ಅಭ್ಯಾಗತರಾಗಿ ಆಗಮಿಸಲಿದ್ದಾರೆ. 


ಎರಡು ದಿನಗಳಲ್ಲಿಯೂ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ ಎಂದು ಪ್ರಾಚಾರ್ಯ ಪ್ರಮೋದ್ ಕುಮಾರ್. ಬಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 


Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top