ಗೋವಿಂದದಾಸ ಕಾಲೇಜಿನಲ್ಲಿ ವಿದ್ಯಾರ್ಥಿವೇತನ ವಿತರಣಾ ಕಾರ್ಯಕ್ರಮ

Upayuktha
0



ಸುರತ್ಕ್‌ಲ್‌: ಆರ್ಥಿಕ ಸಂಕಷ್ಟಗಳಿಂದ ವಿದ್ಯಾರ್ಥಿಗಳು ಉನ್ನತ ಶಿಕ್ಷಣದಿಂದ ವಂಚಿತರಾಗಬಾರದೆಂಬ ಸದುದ್ಧೇಶದಿಂದ ದಾನಿಗಳು ನೀಡುವ  ವಿದ್ಯಾರ್ಥಿ ವೇತನಗಳನ್ನು ವಿದ್ಯಾರ್ಥಿಗಳು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಹಿಂದು ವಿದ್ಯಾದಾಯಿನೀ ಸಂಘ (ರಿ)ಯ ಆಡಳಿತಕ್ಕೊಳಪಟ್ಟ ಗೋವಿಂದದಾಸ ಕಾಲೇಜಿನ ಪ್ರಾಚಾರ್ಯ ಪ್ರೊ. ಕೃಷ್ಣಮೂರ್ತಿ ಪಿ. ನುಡಿದರು.


ಅವರು ಅಲ್‍ಕಾರ್ಗೊ ಲಾಜಿಸ್ಟಿಕ್ ಲಿ. ಸಂಸ್ಥೆಯು ದಿಶಾ ಪ್ರೊಜೆಕ್ಟ್‌ನಲ್ಲಿ ಕೊಡಮಾಡುತ್ತಿರುವ ಅವಶ್ಯ ಫೌಂಡೇಶನ್‍ ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.


ವಾಣಿಜ್ಯ ವಿಭಾಗದ ಡೀನ್ ಮತ್ತು ಸ್ನಾತಕೋತ್ತರ ವಾಣಿಜ್ಯ ವಿಭಾಗದ ಸಂಯೋಜಕ ಡಾ.ಗಣೇಶ ಆಚಾರ್ಯ ಮಾತನಾಡಿ, ಆಲ್‍ಕಾರ್ಗೊ ಲಾಜಿಸ್ಟಿಕ್ ಲಿ.ಸಂಸ್ಥೆಯು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ನಿರಂತರವಾಗಿ ವಿದ್ಯಾರ್ಥಿ ವೇತನ ನೀಡುತ್ತಿರುವುದು ಶ್ಲಾಘನೀಯ ಎಂದರು.


ಸ್ನಾತಕೋತ್ತರ ರಸಾಯನ ಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ಕಾರ್ತಿಕ್‍ ಜೆ.ಎಸ್ ಮಾತನಾಡಿ,  ವಿದ್ಯಾರ್ಥಿಗಳು ತಾವು ಉದ್ಯೋಗಸ್ಥರಾದಾಗ ಅರ್ಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನಗಳನ್ನು ನೀಡಿದರೆ ಶಿಕ್ಷಣ ಕ್ಷೇತ್ರದ ಅಭಿವೃದ್ಧಿ ಸಾಧ್ಯವಿದೆ ಎಂದರು.


ಕಛೇರಿ ಅಧೀಕ್ಷಕ ವೆಂಕಪ್ಪ ಮೂಲ್ಯ ಎಂ.ಸ್ವಾಗತಿಸಿ ವಂದಿಸಿದರು. ರಶ್ಮಿ ವಿದ್ಯಾರ್ಥಿಗಳ ಪಟ್ಟಿಯನ್ನು ವಾಚಿಸಿದರು.


1,72,000 ರೂ ಮೌಲ್ಯದ ವಿದ್ಯಾರ್ಥಿ ವೇತನವನ್ನು 35 ವಿದ್ಯಾರ್ಥಿಗಳಿಗೆ ವಿತರಿಸಲಾಯಿತು. 



 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top