ಶಿವಮೊಗ್ಗ: ಡಿ.6-7ರಂದು ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜಿನಲ್ಲಿ 'ಅನ್ವೇಷಣಾ-2024'

Upayuktha
0

'ಶೈಕ್ಷಣಿಕ ವಸ್ತುಪ್ರದರ್ಶನ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳು




ಶಿವಮೊಗ್ಗ: ಮಾನಸ ಟ್ರಸ್ಟ್‌ನ ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜಿನ ಆವರಣದಲ್ಲಿ ಡಿಸೆಂಬರ್ 6 ಹಾಗೂ 7 ರಂದು ವಿಶೇಷ ಶೈಕ್ಷಣಿಕ ವಸ್ತು ಪ್ರದರ್ಶನ ಹಾಗೂ 7ನೇ ತಾರೀಖಿನಂದು ‘ಅನ್ವೇಷಣಾ’ ಎಂಬ ಪ್ರತಿಭಾನ್ವೇಷಣೆ ಸ್ಪರ್ಧಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮಗಳು ಶಿವಮೊಗ್ಗದ ಮಲ್ಲಿಗೇನಹಳ್ಳಿಯಲ್ಲಿರುವ ಕಾಲೇಜಿನ ಆವರಣದಲ್ಲಿ ನಡೆಯಲಿವೆ.


ಡಿ.6ರಂದು ರಂದು ಬೆಳಗ್ಗೆ 10:30 ಗಂಟೆಗೆ ಈ ಕಾರ್ಯಕ್ರಮಗಳನ್ನು ಶಿವಮೊಗ್ಗದ ಶಾಸಕ ಚೆನ್ನಬಸಪ್ಪನವರು ಉದ್ಘಾಟಿಸಲಿದ್ದು ಮಾನಸ ಸಂಸ್ಥೆಯ ನಿರ್ದೇಶಕರಾದ ಡಾ. ರಜನಿ ಪೈರವರು ಉಪಸ್ಥಿತರಿರುತ್ತಾರೆ. ವಿವಿಧ ಮಾದರಿಗಳ ಮೂಲಕ ಕಾಲೇಜಿನ ವಿದ್ಯಾರ್ಥಿಗಳು ವಿಜ್ಞಾನ, ಮಾನವಿಕ ವಿಜ್ಞಾನ, ಕಂಪ್ಯೂಟರ್ ಸೈನ್ಸ್, ಇತಿಹಾಸ, ಅರ್ಥಶಾಸ್ತ್ರ, ಸಮಾಜಶಾಸ್ತ್ರದ ವಿವಿಧ ಪರಿಕಲ್ಪನೆಗಳನ್ನು ಸಾದರ ಪಡಿಸಲಿದ್ದಾರೆ.


ವಿಶೇಷವಾಗಿ ಮನಃಶಾಸ್ತçದ ಹಲವು ಕುತೂಹಲಕಾರಿ ವಿಷಯಗಳನ್ನು ಪ್ರಸ್ತುತ ಪಡಿಸಲಾಗುವುದು. ಸಮಾಜ ಕಾರ್ಯ ವಿಭಾಗದಿಂದ ಮಕ್ಕಳ ಹಕ್ಕುಗಳು ಮತ್ತು ನಾವು ಎಂಬ ವಿಷಯದ ಕುರಿತು ವಿವರಗಳನ್ನು ನೀಡಲಿದ್ದಾರೆ. ಇದೊಂದು ವಿಶೇಷ ಶೈಕ್ಷಣಿಕ ವಸ್ತುಪ್ರದರ್ಶನವಾಗಿದ್ದು, ಸಾರ್ವಜನಿಕರು, ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಡಿಸೆಂಬರ್ 6 ಮತ್ತು 7 ರಂದು ವೀಕ್ಷಿಸಲು ಪ್ರಾಂಶುಪಾಲರಾದ ಡಾ. ಸಂಧ್ಯಾ ಕಾವೇರಿ ಕೆ ಕೋರಿರುತ್ತಾರೆ.


ದಿನಾಂಕ 7.12.2024 ರಂದು ಕಾಲೇಜಿನ ಆವರಣದಲ್ಲಿ ಪದವಿ ಪೂರ್ವ ವಿದ್ಯಾರ್ಥಿಗಳಿಗಾಗಿ ರಸಪ್ರಶ್ನೆ, ಸಮೂಹ ನೃತ್ಯ, ಸಮೂಹ ಗಾಯನ, ಮಂಡಲ ರಂಗೋಲಿ ಹಾಗೂ ಭಿತ್ತಿ ಪತ್ರ ರಚನೆ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ. ಅದೇ ದಿನ ವಿವಿಧ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರಿಗಾಗಿ ನುರಿತ ಮನಃಶಾಸ್ತ್ರಜ್ಞರಿಂದ ಹದಿಹರೆಯದ ಮನಃಶಾಸ್ತ್ರ  ಹಾಗೂ ತರಗತಿ ನಿರ್ವಹಣೆ ಎಂಬ ವಿಷಯದ ಕುರಿತು ಕಾರ್ಯಗಾರವನ್ನು ಏರ್ಪಡಿಸಲಾಗಿದ್ದು, ಪದವಿಪೂರ್ವ ಕಾಲೇಜಿನ ಉಪನ್ಯಾಸಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಕೋರಲಾಗಿದೆ.


ಅದೇ ದಿನ ಮಧ್ಯಾಹ್ನ 2.30 ಗಂಟೆಗೆ ಈ ಎಲ್ಲಾ ಕಾರ್ಯಕ್ರಮಗಳ ಮುಕ್ತಾಯ ಸಮಾರಂಭ ಹಾಗೂ ಬಹುಮಾನ ವಿತರಣೆ ಕಾರ್ಯಕ್ರಮದಲ್ಲಿ ಶಿವಮೊಗ್ಗದ ಖ್ಯಾತ ನೃತ್ಯ ಗುರು ಶ್ರೀಮತಿ ಸಹನಾಚೇತನ್ ಸಮಾರೋಪ ನುಡಿಗಳನ್ನು ಆಡುವರು ಹಾಗೂ ಪದವಿಪೂರ್ವ ಕಾಲೇಜಿನ ಉಪನ್ಯಾಸಕರ ಸಂಘದ ಅಧ್ಯಕ್ಷ ಯೋಗಿಶ್ ಎಸ್ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು ಎಂದು ಪ್ರಾಂಶುಪಾಲರು ತಿಳಿಸಿರುತ್ತಾರೆ.


ಈ ಎಲ್ಲಾ ಕಾರ್ಯಕ್ರಮಗಳಲ್ಲಿ ಸಾರ್ವಜನಿಕರು, ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ‘ಅನ್ವೇಷಣಾ’ ಸಂಯೋಜಕ  ಮಂಜುನಾಥ ಸ್ವಾಮಿ ಕೋರಿರುತ್ತಾರೆ.

ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 


Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top