ಪೆರ್ನಾಜೆ: ಬೆಂಗಳೂರು ಅರಮನೆ ಮೈದಾನದಲ್ಲಿ ನಡೆದ ತೃತೀಯ ವಿಶ್ವ ಹವ್ಯಕ ಸಮ್ಮೇಳನದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 81 ಕೃಷಿಕರಿಗೆ "ಹವ್ಯಕ ಕೃಷಿ ರತ್ನ" ಪ್ರಶಸ್ತಿ ಪ್ರಧಾನ ಮಾಡಿದರು.
ಕುಕ್ಕೆ ಶ್ರೀ ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾ ಪ್ರಸನ್ನತೀರ್ಥ ಸ್ವಾಮೀಜಿ ಅವರು ಆಶೀರ್ವಚನ ನೀಡಿದರು. ವಾಗ್ಮಿ, ಚಿಂತಕ ಚಕ್ರವರ್ತಿ ಸೂಲಿಬೆಲೆಯವರು ದಿಕ್ಸೂಚಿ ಭಾಷಣವನ್ನು ನೀಡಿದರು.
ಗೌರವಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ಅಖಿಲ ಹವ್ಯಕ ಮಹಾಸಭಾ ಅಧ್ಯಕ್ಷ ಗಿರಿಧರಕಜೆ, ವೇ.ಮೂ ಶೇಷಗಿರಿ ಪ್ರಧಾನ ಅರ್ಚಕರು ಸಿಗಂದೂರು, ಕಟೀಲು ದೇವಸ್ಥಾನದ ಆಡಳಿತ ಮೊಕ್ತೇಸರ ವೇ.ಮೂ ಹರಿನಾರಾಯಣ ಆಸ್ರಣ್ಣ, ಮುಖ್ಯಸ್ಥರು ಸಂಚಾಲಕರಾದ ಗಣೇಶ್ ಚಂದ್ರ ಮುಂತಾದ ಗಣ್ಯರ ಸಮ್ಮುಖದಲ್ಲಿ ಸೌಮ್ಯ ಪೆರ್ನಾಜೆ ಅವರಿಗೆ ಡಿ. 27 ರಂದು ವಿಶ್ವ ಹವ್ಯಕ ಸಮ್ಮೇಳನದಲ್ಲಿ ಗಣ್ಯರ ಸಮ್ಮುಖದಲ್ಲಿ ಹವ್ಯಕ ಕೃಷಿ ರತ್ನ ಪ್ರಶಸ್ತಿ ಪ್ರದಾನ ಮಾಡಿದರು.
ಕಲಾ ನಿರ್ದೇಶಕ, ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ಕುಮಾರ್ ಪೆರ್ನಾಜೆಯವರ ಪತ್ನಿ ಇವರು. ಇವರಿಗೆ ಈಗಾಗಲೇ ಗಡಿನಾಡ ದ್ವನಿ, "ಮಧುಭೂಷಣ" ರಾಜ್ಯ ಪ್ರಶಸ್ತಿ, ಈಶ್ವರಮಂಗಲದಲ್ಲಿ ನಡೆದ ಗ್ರಾಮ ಗ್ರಾಮ ಸಾಹಿತ್ಯ ಸಂಭ್ರಮ ಮೂರನೇ ಸರಣಿ ಕಾರ್ಯಕ್ರಮದಲ್ಲಿ, ವಿಟ್ಲ "ಸ್ವರ ಸಿಂಚನ" ಸಂಗೀತೋತ್ಸವ 2024ರಲ್ಲೂ ಗೌರವಿಸಲಾಗಿತ್ತು. ಇವರು ಪಟಿಕ್ಕಲ್ಲು ರಾಮಚಂದ್ರ ಭಟ್ ಮತ್ತು ದೇವಕಿ ದಂಪತಿಯವರ ಪುತ್ರಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ