ಮಾಜಿ ಸೈನಿಕರಿಗೆ ನಿವೇಶನ ನೀಡಲು ಕ್ರಮ: ಸಚಿವ ಕೃಷ್ಣ ಬೈರೇಗೌಡ

Upayuktha
0


ಬೆಳಗಾವಿ (ಸುವರ್ಣಸೌಧ): ರಾಜ್ಯದಲ್ಲಿರುವ ಮಾಜಿ ಸೈನಿಕರಿಗೆ ವ್ಯವಸಾಯದ ಉದ್ದೇಶಕ್ಕಾಗಿ ಭೂ ಮಂಜೂರಾತಿ ಮಾಡಲು ರಾಜ್ಯದಲ್ಲಿ ಸರ್ಕಾರಿ ಭೂಮಿಯ ತೀವ್ರ ಕೊರತೆಯಿರುವುದರಿಂದ,  ಅವರಿಗೆ ನಿವೇಶನ ನೀಡಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು.


ಅವರು ಇಂದು ವಿಧಾನ ಪರಿಷತ್ತಿನಲ್ಲಿ ಸದಸ್ಯ ಸಿ. ಎನ್. ಮಂಜೇಗೌಡ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದರು.


ದೇಶಕ್ಕಾಗಿ ಸೇವೆ ಸಲ್ಲಿಸಿರುವ ಮಾಜಿ ಸೈನಿಕರ ಕುರಿತಂತೆ ಗೌರವ ಮತ್ತು ಅಭಿಮಾನವಿದೆ. ಜವಾನ್ ಸಮ್ಮಾನ್ ಹೆಸರಿನಲ್ಲಿ ಮಾಜಿ ಸೈನಿಕರಿಗೆ ಸರ್ಕಾರಿ ವೆಚ್ಚದಲ್ಲಿಯೇ ಲೇ ಔಟ್ ಮಾಡಿ, ನಿವೇಶನ ನೀಡುವ ಕುರಿತಂತೆ ಪ್ರಸ್ತುತ ಅಧಿವೇಶನ ಮುಗಿದ ಕೂಡಲೇ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗುವುದು ಎಂದರು.


ರಾಜ್ಯದಲ್ಲಿ ಪ್ರಸ್ತುತ 16065 ಮಾಜಿ ಸೈನಿಕರು ಭೂ ಮಂಜೂರಾತಿಗಾಗಿ ಅರ್ಜಿ ಸಲ್ಲಿಸಿದ್ದು, ಅದರಲ್ಲಿ 6783 ಅರ್ಜಿ ವಿಲೇವಾರಿ ಮಾಡಿದ್ದು, 9282  ಅರ್ಜಿಗಳು ಬಾಕಿ ಇವೆ ಎಂದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top