ಸುರತ್ಕಲ್: ವಾರ್ಡ್-03 ಕಾಟಿಪಳ್ಳ 10 ಲಕ್ಷ ಮೊತ್ತದ ರಸ್ತೆ ಕಾಮಗಾರಿಯ ಉದ್ಘಾಟನೆ ಮತ್ತು 10 ಲಕ್ಷದ ಕಾಮಗಾರಿಗೆ ಗುದ್ದಲಿ ಪೂಜೆಯನ್ನು ಶಾಸಕ ಡಾ. ವೈ ಭರತ್ ಶೆಟ್ಟಿಯವರು ನೆರವೇರಿಸಿದರು.
ಕಾಟಿಪಳ್ಳ 3ನೇ ವಾರ್ಡ್ ವಾರ್ಡ್ ವ್ಯಾಪ್ತಿಯ ವಾಸುಕಿ ನಗರ 3ನೇ ಅಡ್ಡರಸ್ತೆಯ 10 ಲಕ್ಷದ ವೆಚ್ಚದಲ್ಲಿ ನಿರ್ಮಾಣಗೊಂಡ ಕಾಂಕ್ರೀಟ್ ರಸ್ತೆಯನ್ನು ಉದ್ಘಾಟಿಸಿದರು ವಾಸುಕಿ ನಗರದ ಬಳಿ 10 ಲಕ್ಷದ ರಸ್ತೆ ಕಾಮಗಾರಿಗೆ ಮಂಗಳೂರು ಮಹಾನಗರ ಪಾಲಿಕೆ ಮೇಯರ್ ಮನೋಜ್ ಕುಮಾರ್ ಮತ್ತು ಸ್ಥಳೀಯ ಕಾರ್ಪೊರೇಟರ್ ಲೋಕೇಶ್ ಬೊಳ್ಳಾಜೆಯವರೊಂದಿಗೆ ಗುದ್ದಲಿ ಪೂಜೆ ನೆರವೇರಿಸಿದರು.
ವಾರ್ಡ್ ಅಧ್ಯಕ್ಷರು ಶಾಂತಕುಮಾರ್ ಮಹಾ ಶಕ್ತಿ ಕೇಂದ್ರ ಅಧ್ಯಕ್ಷರಾದ ದಿನಕರ್ ಇಡ್ಯಾ, ಎಸ್‌ಸಿ ಮೋರ್ಚಾ ಮಂಡಲ ಅಧ್ಯಕ್ಷರು ಹರೀಶ್ ಪಣಂಬೂರು ಮಹಿಳಾ ಮೋರ್ಚಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಸಪ್ನಾ ಸುನಿಲ್, ಜಿಲ್ಲಾ ಅಲ್ಪ ಸಂಖ್ಯಾತ ಮೋರ್ಚಾ ಸದಸ್ಯರು ಪ್ರೇಮ್ ಡಿಸೋಜ, ಮಂಡಲ ಸದಸ್ಯರಾದ ಶೈಲಜಾ ಗಣೇಶ್ ಕಟ್ಟೆ ಬಿಜೆಪಿ ಪ್ರಮುಖರಾದ ಗಣೇಶ್, ಆರತಿ, ಕಾರ್ಯಕರ್ತರು ಸ್ಥಳೀಯ ನಾಗರಿಕರು ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ