ಸುರತ್ಕಲ್: ವಿದ್ಯಾದಾಯಿನೀ ಪ್ರೌಢಶಾಲೆಯ ವಾರ್ಷಿಕೋತ್ಸವ

Upayuktha
0


ಸುರತ್ಕಲ್: ವಿದ್ಯಾರ್ಥಿಗಳು ಕಲಿಕೆಯ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಕಠಿಣ ಶ್ರಮವಹಿಸಿ ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕೆಂದು ಸಾಮಾಜಿಕ ಮುಂದಾಳು ಮಂಗಳೂರಿನ ಲಯನ್ಸ್ ಡಿಸ್ಟ್ರಿಕ್ಟ್ ಜಾಯಿಂಟ್ ಪಿ.ಆರ್.ಒ ಲಯನ್ ಬಿ ಪ್ರಕಾಶ್ ಪೈ, ವಿದ್ಯಾರ್ಥಿಗಳಿಗೆ ಹಿತವಚನ ನುಡಿದರು.


ಇವರು ಹಿಂದು ವಿದ್ಯಾದಾಯಿನೀ ಸಂಘದ ಆಡಳಿತಕ್ಕೊಳಪಟ್ಟ ಅನುದಾನಿತ ವಿದ್ಯಾದಾಯಿನೀ ಪ್ರೌಢಶಾಲೆಯ ವಾರ್ಷಿಕೋತ್ಸವದಲ್ಲಿ ಬೆಳಗ್ಗೆ ನಡೆದ ಧ್ವಜವಂದನೆ ಹಾಗೂ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಕಾರ್ಯಕ್ರಮವನ್ನು ನೆರವೇರಿಸಿದರು. ವೇದಿಕೆಯಲ್ಲಿ ಲಯನ್ ವಿಜಯಲಕ್ಷ್ಮೀ ಪೈ, ಶಾಲಾ ಸಂಚಾಲಕ ಸುಧಾಕರ್ ರಾವ್ ಪೇಜಾವರ ಮತ್ತು ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ಶ್ರಿಮತಿ ಸುಜಯ ಉಪಸ್ಥಿತರಿದ್ದರು.


ಶಾಲಾ ಮುಖ್ಯೋಪಾಧ್ಯಾಯ ಬಾಲಚಂದ್ರ ಕೆ. ಎಲ್ಲರನ್ನೂ ಸ್ವಾಗತಿಸಿದರು. ಸಹ ಶಿಕ್ಷಕ ವಸಂತ ಕುಮಾರ್ ನಾಯ್ಕ್ ಮತ್ತು ಶ್ರೀಮತಿ ಪುಷ್ಪ ಇವರು ಪಠ್ಯ ಪೂರಕ ಬಹುಮಾನ ಪಟ್ಟಿಯನ್ನು ವಾಚಿಸಿದರು. ದಿವಸ್ಪತಿ ಕಾರ್ಯಕ್ರಮವನ್ನು ನಿರೂಪಿಸಿ, ಶಾಲಾ ಉಪವಿದ್ಯಾರ್ಥಿ ನಾಯಕಿ ನೀಹಾರಿಕ ವಂದಿಸಿದಳು.


ಈ ಸಂದರ್ಭದಲ್ಲಿ ರಕ್ಷಕ ಶಿಕ್ಷಕ ಸಂಘದ ಗೌರವಾಧ್ಯಕ್ಷ ಗಂಗಾಧರ ಪೂಜಾರಿ, ರಕ್ಷಕ ಶಿಕ್ಷಕ ಸಂಘದ ಪದಾಧಿಕಾರಿಗಳು ಹಾಗೂ ಮಕ್ಕಳ ಪೋಷಕರು ಉಪಸ್ಥಿತರಿದ್ದರು. ಎಲ್ಲಾ ವಿದ್ಯಾರ್ಥಿಗಳಿಗೆ ಐಸ್ ಕ್ರೀಮ್ ಮತ್ತು ವಿಶೇಷ ಸಿಹಿ ಊಟದ ವ್ಯವಸ್ಥೆ ಮಾಡಲಾಯಿತು.



Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top