ಮಂಗಳೂರು: ಸುರತ್ಕಲ್ ಎಂಆರ್ಪಿಎಲ್ ರಸ್ತೆಯ ರೈಲ್ವೆ ಮೇಲ್ಸೇತುವೆ ಕಾಂಕ್ರಿಟೀಕರಣ ಕಾಮಗಾರಿಗಾಗಿ ವಾಹನ ಸಂಚಾರ ನಿಷೇಧಿಸಿ, ಬದಲೀ ಮಾರ್ಗ ಉಪಯೋಗಿಸುವ ಕುರಿತಂತೆ ಮಂಗಳೂರು ಉತ್ತರ ಸಂಚಾರಿ ಠಾಣೆಯಿಂದ ಮಂಗಳೂರು ಕಮೀಷನರ್ ಅವರ ಅನುಮತಿಗಾಗಿ ಕಳಿಸಿದೆ.
ಸುರತ್ಕಲ್ ಆಸುಪಾಸಿನ ಜನರಿಗೆ ಸೂರಜ್ ಹೋಟೆಲ್ ಬಳಿಯ ಚೊಕ್ಕಬೆಟ್ಟು ರಸ್ತೆ ಹಾಗೂ ಮಂಗಳೂರು ಕಡೆಯಿಂದ ಬರುವವರಿಗೆ ಕುಳಾಯಿ ಕಾನಾ ರಸ್ತೆಯಾಗಿ ಚೊಕ್ಕಬೆಟ್ಟು ಹೋಗಲು ಬದಲಿ ಮಾರ್ಗ ಸೂಚಿಸಲಾಗಿದೆ.
ಆಯುಕ್ತರ ಪತ್ರಿಕಾ ಪ್ರಕಟಣೆ ಬಂದ ಬಳಿಕ ಗುತ್ತಿಗೆದಾರರು ಕಾಮಗಾರಿ ಆರಂಭಿಸಲು ನಿರ್ಧರಿಸಿದ್ದಾರೆ.
ಕಾಂಕ್ರಿಟೀಕರಣ ಕಾಮಗಾರಿಗೆ ಮಂಗಳೂರು ಮಹಾನಗರ ಪಾಲಿಕೆಯ ನಿಧಿಯಿಂದ 78 ಲಕ್ಷ ರೂ.ಮಂಜೂರು ಮಾಡಲಾಗಿದೆ. ಕಾಮಗಾರಿ ಸಂದರ್ಭ ಒಂದೆರಡು ತಿಂಗಳು ಬದಲಿ ಮಾರ್ಗ ಉಪಯೋಗಿಸುವ ಅನಿವಾರ್ಯತೆಯಿದ್ದು ವಾಹನ ಸವಾರರು ಜನರು ಸಹಕರಿಸಬೇಕು. ಶಾಶ್ವತ ಕಾಮಗಾರಿ ಮಾಡುವ ನಿಟ್ಟಿನಲ್ಲಿ ಕಾಂಕ್ರಿಟ್ ಮಾರ್ಗ ಅಗತ್ಯವಾಗಿದೆ. ಜನತೆ ಸಹಕರಿಸಬೇಕು ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ವಿನಂತಿಸಿಕೊಂಡಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ