ಮಾನವ ಹಕ್ಕುಗಳು ಪ್ರಜಾಪ್ರಭುತ್ವದ ಪ್ರತೀಕ: ಪ್ರಶಾಂತ ನೀಲಾವರ

Upayuktha
0


ಉಡುಪಿ: ವಿಶ್ವದ ಚರಿತ್ರೆಯಲ್ಲಿ ಮಾನವ ಹಕ್ಕುಗಳ ಹೋರಾಟಕ್ಕೆ ಬಹುದೊಡ್ಡ ಇತಿಹಾಸವಿದೆ. ಇಂದು ನಾವು ಬದುಕುವ ನೆಮ್ಮದಿಯ ಬದುಕಿಗೆ ಮಾನವ ಹಕ್ಕುಗಳೇ ತಳಹದಿ. ಮಾನವ ಹಕ್ಕುಗಳು ಪ್ರಜಾಪ್ರಭುತ್ವದ ನೈಜ ಪ್ರತೀಕ ಎಂದು ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರಶಾಂತ ನೀಲಾವರ ಹೇಳಿದರು. 


ಅವರು ಸೋಮವಾರ ಸರಕಾರಿ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ಭಾರತೀಯ ರೆಡ್‍ಕ್ರಾಸ್ ಸಂಸ್ಥೆ ಉಡುಪಿ ಜಿಲ್ಲಾ ಘಟಕ ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜು ಉಡುಪಿ ಇಲ್ಲಿನ ರೆಡ್ ರಿಬ್ಬನ್ ಕ್ಲಬ್ ಕಿರಿಯ ಯುವ ರೆಡ್‍ಕ್ರಾಸ್ ಘಟಕ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ವಿಶ್ವ ಮಾನವ ಹಕ್ಕುಗಳ ದಿನಾಚರಣೆಯಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡುತ್ತಿದ್ದರು. 


ಕಾರ್ಯಕ್ರಮವನ್ನು ಉದ್ಘಾಟಿಸಿದ ಜಿಲ್ಲಾ ರೆಡ್‍ಕ್ರಾಸ್ ಸಭಾಪತಿ ಬಸ್ರೂರು ರಾಜೀವ್ ಶೆಟ್ಟಿ ಮಾತನಾಡಿ, ಮಾನವ ಹಕ್ಕುಗಳ ಕುರಿತಾದ ಅರಿವು ಇಂದು ಅತೀ ಅಗತ್ಯವಾಗಿದೆ. ಈ ದೃಷ್ಟ್ಟಿಯಿಂದ ಇಂತಹ ಕಾರ್ಯಕ್ರಮಗಳು ಮಹತ್ವವಾದುದು ಎಂದರು. 

 

ಕಾಲೇಜಿನ ಪ್ರಾಂಶುಪಾಲೆ ಲೀಲಾಬಾಯಿ ಭಟ್ ಅಧ್ಯಕ್ಷತೆ ವಹಿಸಿದ್ದರು.


ಜಿಲ್ಲಾ ರೆಡ್‍ಕ್ರಾಸ್ ಖಜಾಂಚಿ ರಮಾದೇವಿ, ನಿಕಟಪೂರ್ವ ಖಜಾಂಚಿ ಚಂದ್ರಶೇಖರ್, ಕಾಲೇಜಿನ ವಿದ್ಯಾರ್ಥಿಗಳು, ಉಪನ್ಯಾಸಕರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.


ರೆಡ್‍ಕ್ರಾಸ್ ಕಾರ್ಯದರ್ಶಿ ಡಾ. ಗಣನಾಥ ಎಕ್ಕಾರು ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಕಿರಿಯ ರೆಡ್ ಕ್ರಾಸ್ ಸ್ವಯಂ ಸೇವಕಿಯರು ಪ್ರಾರ್ಥಿಸಿದರು. ಉಪನ್ಯಾಸಕಿ ಪ್ರಿಯಕಾರಿಣಿ ಜೈನ್ ನಿರೂಪಿಸಿ, ರೆಡ್ ರಿಬ್ಬನ್ ಕ್ಲಬ್ ಸಂಯೋಜಕಿ ಸುಮನ ವಂದಿಸಿದರು.



  ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top