ಕುವೆಂಪುರವರ ಕೃತಿಗಳಲ್ಲಿ ಬದುಕಿನ ಆಗಾಧತೆ ಮತ್ತು ವಿಸ್ತರತೆ ಅಡಗಿದೆ: ಉಡುಪಿ ಡಿಸಿ

Upayuktha
0


ಉಡುಪಿ: ಕನ್ನಡ ಸಾಹಿತ್ಯದಲ್ಲಿ ಕುವೆಂಪುರವರು ಒಬ್ಬ ಮೇರು ಕವಿಯಾಗಿದ್ದು, ಅವರ ಶ್ರೀ ರಾಮಾಯಣ ದರ್ಶನಂ, ಮಲೆಗಳಲ್ಲಿ ಮದುಮಗಳು, ಕಾನೂರು ಹೆಗ್ಗಡತಿಯಂತಹ ಮುಖ್ಯ ಕಾದಂಬರಿಗಳನ್ನು ಓದಿ ಬದುಕಿನ ಆಗಾಧತೆ ಮತ್ತು ವಿಸ್ತರತೆಯನ್ನು ತಿಳಿದುಕೊಳ್ಳಬಹುದು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಹೇಳಿದರು.


ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಶ್ರಯದಲ್ಲಿ ರಾಷ್ಟ್ರಕವಿ ಕುವೆಂಪುರವರ ಜಯಂತಿ ಪ್ರಯುಕ್ತ ನಡೆದ ವಿಶ್ವ ಮಾನವ ದಿನಾಚರಣೆ ಕಾರ್ಯಕ್ರಮದಲ್ಲಿ ಶೋಕಾಚರಣೆ ಹಿನ್ನೆಲೆ, ಸಾಂಕೇತಿಕವಾಗಿ ಕುವೆಂಪುರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡುತ್ತಿದ್ದರು.


ಕುವೆಂಪುರವರು ಕರ್ನಾಟಕದಲ್ಲಿ ಮಾತ್ರವಲ್ಲದೇ ಭಾರತದ ಸಾಹಿತ್ಯದಲ್ಲೇ ಉತ್ತಮ ಹೆಸರನ್ನು ಪಡೆದವರು. ತಮ್ಮ ಸಾಹಿತ್ಯದ ಮೂಲಕ ಕನ್ನಡಿಗರಲ್ಲಿ ಕನ್ನಡಾಭಿಮಾನ ಮೂಡಿಸಿ, ಸಾಹಿತ್ಯ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದಾರೆ ಎಂದರು.


ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‍ನ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ಕನ್ನಡ ಸಾಹಿತ್ಯ ಪರಿಷತ್‍ನ ಮಾಧ್ಯಮ ಕಾರ್ಯದರ್ಶಿ ನರಸಿಂಹಮೂರ್ತಿ, ಜಿಲ್ಲಾಧಿಕಾರಿ ಕಚೇರಿಯ ಸಿಬ್ಬಂದಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು. 


ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಸ್ವಾಗತಿಸಿ, ನಿರೂಪಿಸಿ ವಂದಿಸಿದರು.



 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top