ಕುಮಟಾ: ಬರ್ಗಿ ದೇವಸ್ಥಾನಕ್ಕೆ ಕನ್ನ

Upayuktha
0


ಕುಮಟಾ: ತಾಲೂಕಿನ ಬರ್ಗಿ ಗ್ರಾಮದ ಶ್ರೀ ಘಟಭೀರ ದೇವಸ್ಥಾನಕ್ಕೆ ಕಳ್ಳರು ಕನ್ನ ಹಾಕಿದ್ದು, ಲಕ್ಷಾಂತರ ರೂ ಮೌಲ್ಯದ ನಗ-ನಗದನ್ನು ದೋಚಿದ್ದಾರೆ ಎಂದು ಗೋಕರ್ಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.


ಕಳ್ಳರು ಬೀಗ ಮುರಿದು ದೇವಸ್ಥಾನದ ಒಳಗಿದ್ದ ಇನ್ವರ್ಟರ್ ಬ್ಯಾಟರಿ, ಕಾಣಿಕೆ ಹುಂಡಿ ಹಾಗೂ ಇನ್ನೂ ಅನೇಕ ವಸ್ತುಗಳನ್ನು ಕದ್ದಿದ್ದಾರೆ ಎಂದು ದೂರಿನಲ್ಲಿ ದಾಖಲಾಗಿದೆ.


ವಿಷಯ ತಿಳಿಯುತ್ತಿದ್ದ ಹಾಗೆ ಕಾರವಾರದಿಂದ ಶ್ವಾನ ದಳ ಹಾಗೂ ಬೆರಳಚ್ಚು ತಜ್ಞರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಶ್ವಾನ ದೇವಸ್ಥಾನದ ಹಿಂದಿನಿಂದ ರಾಷ್ಟ್ರೀಯ ಹೆದ್ದಾರಿವರೆಗೆ ಹೋಗಿದೆಯೇ ಹೊರತು ಇದರಿಂದ ಬೇರೇನೂ ಮಾಹಿತಿ ಸಿಕ್ಕಿಲ್ಲ ಎಂದು ಸ್ಥಳದಲ್ಲಿದ್ದ ಊರ ಮಂದಿ ಮಾಧ್ಯಮಕ್ಕೆ ತಿಳಿಸಿದ್ದಾರೆ. ಬೆರಳಚ್ಚು ತಜ್ಞರು ಒಂದಿಷ್ಟು ಬೆರಳಚ್ಚನ್ನು ಪಡೆದು ಹೋಗಿದ್ದಾರೆ. ಈ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 


Post a Comment

0 Comments
Post a Comment (0)
Advt Slider:
To Top