ತೆಂಕನಿಡಿಯೂರು: ಸ್ಪರ್ಧಾತ್ಮಕ ಪರೀಕ್ಷೆಗಳ ಪೂರ್ವ ತಯಾರಿಯ ಕಾರ್ಯಾಗಾರದ ಮೂಲಕ ವಿದ್ಯಾರ್ಥಿಗಳಲ್ಲಿ ಬುದ್ಧಿಮತ್ತೆಯನ್ನು ಹೆಚ್ಚಿಸುವುದು ಮಾತ್ರವಲ್ಲದೆ, ವಿವಿಧ ಪರೀಕ್ಷೆಗಳನ್ನು ಎದುರಿಸುವ ಮನೋಸ್ಥೈರ್ಯವನ್ನು ಇದು ವೃದ್ಧಿಸುತ್ತದೆ. ವಿಷಯದ ಆಳ ಮತ್ತು ವಿಸ್ತಾರತೆ ಮತ್ತು ಪ್ರಾಮುಖ್ಯತೆಯನ್ನು ಅರಿಯಲು ಸಾಧ್ಯವಾಗುತ್ತದೆ. ಅಲ್ಲದೆ ಜ್ಞಾನವಿಕಾಸಕ್ಕೆ ಉತ್ತಮ ತಳಹದಿಯನ್ನು ರೂಪಿಸುವಲ್ಲಿ ಸಹಕಾರಿಯಾಗುತ್ತದೆ ಎಂದು ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಅಜ್ಜರಕಾಡಿನ ಪ್ರಾಂಶುಪಾಲ ಡಾ. ಶ್ರೀಧರ್ ಪ್ರಸಾದ್ ಇವರು ನುಡಿದರು.
ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರಿನ ಐಕ್ಯೂಎಸಿ, ಪ್ಲೇಸ್ಮೆಂಟ್ ಸೆಲ್ ಮತ್ತು ಯೂತ್ ರೆಡ್ ಕ್ರಾಸ್ ಘಟಕದ ಸಹಯೋಗದಲ್ಲಿ ಸ್ನಾತಕೋತ್ತರ ಅಧ್ಯಯನ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ರಾಜ್ಯಮಟ್ಟದ ಯುಜಿಸಿ ಮತ್ತು ಸ್ಪರ್ಧಾತ್ಮಕ ಪರೀಕ್ಷೆಯ ತಯಾರಿ ಕಾರ್ಯಗಾರ ಉದ್ಘಾಟಿಸಿ ಮಾತನಾಡಿದರು.
ಎರಡು ದಿನಗಳ ಪರ್ಯಂತ ನಡೆಯುವ ಈ ಕಾರ್ಯಗಾರದಲ್ಲಿ ಡಾ. ಅಜಯ್ ಅಂಚನ್ ಟೀಚಿಂಗ್ ಆಪ್ಟಿಟ್ಯೂಡ್ ಮತ್ತು ರಿಸರ್ಚ್ ಕುರಿತು, ಮನೋಹರ್ ಬಿ. ರವರು ಮ್ಯಾಥಮೆಟಿಕಲ್ ರೀಸನಿಂಗ್ ಮತ್ತು ಡೇಟಾ ಇಂಟರ್ಪ್ರೆಟೇಶನ್ ಹಾಗೂ ಲಾಜಿಕಲ್ ರೀಸನಿಂಗ್ ಕುರಿತು, ಅಮೃತ ರವರು ಕಮ್ಯುನಿಕೇಶನ್ ಕುರಿತು ಚಂದ್ರ ಖಾರ್ವಿ ರವರು ಪೀಪಲ್ ಅಂಡ್ ಎನ್ವಿರಾನ್ಮೆಂಟ್ ಕುರಿತು ಹಾಗೂ ಪ್ರಶಾಂತ್ ನೀಲಾವರ ರವರು ಹೈಯರ್ ಎಜುಕೇಶನ್ ಸಿಸ್ಟಮ್ ಪಾಲಿಸಿಸ್ ಕುರಿತು ತರಬೇತಿ ನೀಡಲಿದ್ದಾರೆ.
ಕಾಲೇಜಿನ ಪ್ರಾಂಶುಪಾಲ ನಿತ್ಯಾನಂದ ವಿ. ಗಾಂವಕರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಶೈಕ್ಷಣಿಕ ಸಲಹೆಗಾರ ಡಾ. ಶ್ರೀಧರ್ ಭಟ್, ಐಕ್ಯೂಎಸಿ ಸಂಚಾಲಕ ಡಾ. ಮೇವಿ ಮಿರಾಂದ, ವಿದ್ಯಾರ್ಥಿ ಕ್ಷೇಮ ಪಾಲನಾ ಅಧಿಕಾರಿ ಡಾ. ರಘು ನಾಯ್ಕ, ಪ್ಲೇಸ್ಮೆಂಟ್ ಆಫೀಸರ್ ದಿನೇಶ್ ಎಂ. ಉಪಸ್ಥಿತರಿದ್ದರು. ಪ್ರಶಾಂತ ಎನ್. ಕಾರ್ಯಕ್ರಮ ನಿರ್ವಹಿಸಿದರು. ಎರಡು ದಿನಗಳ ಕಾರ್ಯಾಗಾರದಲ್ಲಿ ರಾಜ್ಯದ ವಿವಿಧ ಸ್ನಾತಕೋತ್ತರ ವಿಭಾಗದ 150 ಅಧಿಕ ವಿದ್ಯಾರ್ಥಿಗಳು ಹಾಜರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ