ಬೆಂಗಳೂರು: ಡಿಸೆಂಬರ್ 27,28 ಹಾಗೂ 29 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಐತಿಹಾಸಿಕವಾದ ತೃತೀಯ ವಿಶ್ವ ಹವ್ಯಕ ಸಮ್ಮೇಳನವನ್ನು ಆಯೋಜಿಸಲಾಗಿದ್ದು, ನಾಡಿನ ಸಂತಶ್ರೇಷ್ಠರ ಸಾನ್ನಿಧ್ಯದಲ್ಲಿ ಹಾಗೂ ದೇಶವಿದೇಶಗಳ ಗಣ್ಯಮಾನ್ಯರ ಸಮ್ಮುಖದಲ್ಲಿ ವಿಶಿಷ್ಟ ಹವ್ಯಕ ಸಂಸ್ಕೃತಿಯ ಅನಾವರಣ ಬೃಹತ್ ರೂಪದಲ್ಲಿ ನಡೆಯಲಿದೆ.
567 ಶ್ರೇಷ್ಠ ಸಾಧಕರಿಗೆ ಸನ್ಮಾನ, ಸಾಂಸ್ಕೃತಿಕ ವೈಭವ, ಹಳ್ಳಿಸೊಗಡಿನ ಆಲೇಮನೆ, ಪಾರಂಪರಿಕ ವಸ್ತುಗಳ ಪ್ರದರ್ಶನ, ದೇಶೀ ಗೋಪ್ರದರ್ಶನ, ಹವಿಗನ್ನಡ ಪುಸ್ತಕಗಳ ಪ್ರದರ್ಶನ, ಗಾಯತ್ರೀ ಥೀಮ್ ಪಾರ್ಕ್, ವೈವಿಧ್ಯಮಯ ಧಾರ್ಮಿಕ ಕಾರ್ಯಕ್ರಮಗಳು, ಉತ್ತರ ಪ್ರದೇಶದ ಅಹಿಚ್ಛತ್ರದಿಂದ ಜ್ಯೋತಿಯ ಆಗಮನ, ಸಮಗ್ರ ಅಡಿಕೆ ಪ್ರದರ್ಶನ, ಹವ್ಯಕ ಪಾಕೋತ್ಸವ ಮುಂತಾದವು ಈ ಐತಿಹಾಸಿಕ ಮೂರುದಿನಗಳ ಕಾರ್ಯಕ್ರಮದಲ್ಲಿ ಇರಲಿವೆ. 60 ಜಾತಿ- ಉಪಜಾತಿಗಳ ಸಂಘಟನೆಗಳಿಗೆ ಸೌಹಾರ್ದ ಸನ್ಮಾನ ನಡೆಯಲಿದ್ದು, 1.50 ಲಕ್ಷ ಜನರು ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ