ಎಸ್‌.ಎಂ ಕೃಷ್ಣ ಅವರ ಅಂತಿಮ ದರ್ಶನ ಪಡೆದ ಸಹಸ್ರಾರು ಮಂದಿ

Upayuktha
0

ಸ್ವಲ್ಪ ಹೊತ್ತಿನಲ್ಲೇ ಅಂತ್ಯಕ್ರಿಯೆ ವಿಧಿವಿಧಾನ ಪೂರ್ಣ




ಮಂಡ್ಯ: ಮಂಗಳವಾರ ನಸುಕಿನ ಜಾವ ವಿಧಿವಶರಾಗಿದ್ದ ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರ ಪಾರ್ಥಿವ ಶರೀರ ಇದೀಗ ಅವರ ಹುಟ್ಟೂರಾದ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಸೋಮನಹಳ್ಳಿಗೆ ಆಗಮಿಸಿದೆ. ಅಂತಿಮ ದರ್ಶನಕ್ಕೆ ಜನರು ಸಾಲುಗಟ್ಟಿ ನಿಂತಿದ್ದಾರೆ. ಸದಾಶಿವನಗರದ ಅವರ ನಿವಾಸ 'ಶಾಂಭವಿ'ಯಿಂದ ಆರಂಭವಾಗಿದ್ದ ಎಸ್.ಎಂ ಕೃಷ್ಣ ಅವರ ಪಾರ್ಥಿವ ಶರೀರದ ಅಂತಿಮ ಯಾತ್ರೆ ಇದೀಗ ಸೋಮನಹಳ್ಳಿ ತಲುಪಿದೆ. ಇನ್ನು ಸ್ವಲ್ಪ ಹೊತ್ತಿನ ಬಳಿಕ ಎಸ್.ಎಂ ಕೃಷ್ಣ ಪಾರ್ಥಿವ ಶರೀರದ ಅಂತಿಮ ವಿಧಿ ವಿಧಾನ ಕಾರ್ಯ ಒಕ್ಕಲಿಗ ಸಂಪ್ರದಾಯದಂತೆ ನೆರವೇರಲಿದೆ.


ಬೆಂಗಳೂರಿನ ಸದಾಶಿವನಗರ ಸ್ವಗೃಹದಿಂದ ಹೂವಿನಿಂದ ಅಲಂಕೃತಗೊಂಡ ವಾಹನದಲ್ಲಿ ಪಾರ್ಥಿವ ಶರೀರ ಕೊಂಡೊಯ್ಯಲಾಗಿದೆ. ಬೆಂಗಳೂರಿನ ಟೌನ್ ಹಾಲ್, ಮೈಸೂರು ಸರ್ಕಲ್, ಬಿಡದಿ, ರಾಮನಗರ, ಚನ್ನಪಟ್ಟಣ ಮೂಲಕ ಮಂಡ್ಯದ ಮದ್ದೂರಿಗೆ ಪಾರ್ಥಿವ ಶರೀರ ಆಗಮಿಸಿದೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top