ಉಡುಪಿ: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಉಡುಪಿ ವತಿಯಿಂದ ಪಿಯುಸಿ ವಿದ್ಯಾರ್ಥಿಗಳ ಕ್ರೀಡಾಕೂಟವು ಅಜ್ಜರಕಾಡು ಜಿಲ್ಲಾ ಮೈದಾನದಲ್ಲಿ ಇಂದು (ಡಿ.12) ಸಂಪನ್ನಗೊಂಡಿತು. ಸಮಗ್ರ ಪ್ರಶಸ್ತಿಯಲ್ಲಿ ನಿಟ್ಟೆ ಪದವಿಪೂರ್ವ ಕಾಲೇಜು ಪ್ರಥಮ ಸ್ಥಾನ, ಸರಕಾರಿ ಪದವಿಪೂರ್ವ ಕಾಲೇಜು ಉಡುಪಿ ದ್ವಿತೀಯ ಸ್ಥಾನ ಹಾಗೂ ಮಹಾತ್ಮ ಗಾಂಧಿ ಪದವಿಪೂರ್ವ ಕಾಲೇಜು ಉಡುಪಿ ತೃತೀಯ ಸ್ಥಾನವನ್ನು ಗಳಿಸಿದೆ.
ಕಾರ್ಯಕ್ರಮದ ಉದ್ಘಾಟಕರಾಗಿ ಯುವ ಉದ್ಯಮಿಗಳಾದ ಅಜಯ್ ಪಿ ಶೆಟ್ಟಿ ಆಗಮಿಸಿದ್ದರು. ಮುಖ್ಯ ಅತಿಥಿಗಳಾಗಿ ಎಬಿವಿಪಿ ಹಿರಿಯ ಕಾರ್ಯಕರ್ತ ಡಾ| ಶಿವಾನಂದ್ ನಾಯಕ್ ಮತ್ತು ಮಂಗಳೂರು ವಿಭಾಗ ಖೇಲೋ ಭಾರತ್ ಪ್ರಮುಖರಾದ ಸ್ವಸ್ತಿಕ್ ಪೂಜಾರಿ, ಕರ್ನಾಟಕ ದಕ್ಷಿಣ ಪ್ರಾಂತ ಕಾರ್ಯಕಾರಿಣಿ ಸದಸ್ಯೆ ಸಂಹಿತಾ ಕೆ. ಹಾಗೂ ತಾಲೂಕು ಸಂಚಾಲಕ ಶ್ರೇಯಸ್ ಅಂಚನ್ ಉಪಸ್ಥಿತರಿದ್ದರು.
ವೈಯಕ್ತಿಕ ಮತ್ತು ರಿಲೇ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರ ವಿಭಾಗಗಳ ಒಟ್ಟು 22 ಸ್ಪರ್ಧೆಗಳು ಯಶಸ್ವಿಯಾಗಿ ಸಂಪನ್ನಗೊಂಡು ಸಮಾರೋಪ ಸಮಾರಂಭವು ನಡೆಯಿತು. ವೇದಿಕೆಯಲ್ಲಿ ಎಬಿವಿಪಿ ಜಿಲ್ಲಾ ಪ್ರಮುಖ ರಾಜಶಂಕರ್, ಮಂಗಳೂರು ವಿಭಾಗ ಸಂಚಾಲಕ ಗಣೇಶ್ ಪೂಜಾರಿ, ಜಿಲ್ಲಾ ಸಂಚಾಲಕ ಕಾರ್ತಿಕ್ ಎಂ, ನಗರ ಕಾರ್ಯದರ್ಶಿ ಮಾಣಿಕ್ಯ ಭಟ್ ಉಪಸ್ಥಿತರಿದ್ದರು. ವಿದ್ಯಾರ್ಥಿನಿಯರಾದ ಸುಗಂಧಿ ಹಾಗೂ ಅನುಷಾ ಕಾರ್ಯಕ್ರಮವನ್ನು ನಿರೂಪಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ