ಉಡುಪಿ: ಎನ್.ಎಸ್.ಎಸ್ ಸಲಹಾ ಸಮಿತಿ ಸಭೆ

Upayuktha
0


ಉಡುಪಿ: ವಿದ್ಯಾರ್ಥಿಗಳು ಸಮುದಾಯ ಸೇವಾ ಚಟುವಟಿಕೆಗಳು ಹಾಗೂ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಅನುಕೂಲವಾಗುವಂತೆ ಪ್ರಸ್ತುತ ಸಾಲಿನ ವಾರ್ಷಿಕ ಎನ್.ಎಸ್.ಎಸ್ ಶಿಬಿರವನ್ನು ಅಚ್ಚುಕಟ್ಟಾಗಿ ಹಾಗೂ ವ್ಯವಸ್ಥಿತವಾಗಿ ಆಯೋಜಿಸಬೇಕು ಎಂದು ಡಾ. ಜಿ. ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಪ್ರೊ.ಶ್ರೀಧರ್ ಪ್ರಸಾದ್ ಹೇಳಿದರು.


ಅವರು ಗುರುವಾರ ಡಾ. ಜಿ. ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ತಮ್ಮ ಕಚೇರಿ ಸಭಾಂಗಣದಲ್ಲಿ ನಡೆದ ರಾಷ್ಟ್ರೀಯ ಸೇವಾ ಯೋಜನೆ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. 


ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸದ ಜೊತೆಗೆ ಇತರೆ ಚಟುವಟಿಕೆಗಳಲ್ಲಿ ಭಾಗವಹಿಸುವುದರಿಂದ ಸಾಮಾನ್ಯ ಜ್ಞಾನ ಹೆಚ್ಚುತ್ತದೆ. ಅದರಲ್ಲಿಯೂ ರಾಷ್ಟ್ರೀಯ ಸೇವಾ ಯೋಜನೆಯಲ್ಲಿ ವಿದ್ಯಾರ್ಥಿಗಳು ಸಮುದಾಯ ಸೇವೆಯಲ್ಲಿ ತೊಡಗಿಸಿಕೊಳ್ಳಲು ಹಾಗೂ ನಾಯಕತ್ವದ ಕೌಶಲ್ಯಗಳನ್ನು ಅಭಿವೃದ್ಧಿ ಪಡಿಸಲು ಅವಕಾಶಗಳು ಒದಗುತ್ತವೆ. ಈ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಿ, ಹೆಚ್ಚು ಜನರು ಎನ್.ಎಸ್.ಎಸ್ ನಲ್ಲಿ ಭಾಗವಹಿಸುವಂತೆ ಉತ್ತೇಜಿಸಬೇಕು ಎಂದರು. 


ಎನ್.ಎಸ್.ಎಸ್ ವಿದ್ಯಾರ್ಥಿಗಳಲ್ಲಿ ಸಮಾಜ ಕಲ್ಪನೆ ಹುಟ್ಟುಹಾಕಲು ಹಾಗೂ ಪಕ್ಷಪಾತವಿಲ್ಲದೇ ಸಮಾಜಕ್ಕೆ ಸೇವೆ ಒದಗಿಸುವ ಗುರಿ ಹೊಂದಿದೆ ಎಂದ ಅವರು. ಎನ್.ಎಸ್.ಎಸ್ ಶಿಬಿರದಲ್ಲಿ ಸಾಮಾಜಿಕ ಸಮಸ್ಯೆಗಳು, ಶಿಕ್ಷಣ ಮತ್ತು ಸ್ವಚ್ಛತೆಯಂತಹ ಸಮಸ್ಯೆಗಳ ಕುರಿತು ಜಾಗೃತಿ ಮೂಡಿಸುವ ವೇದಿಕೆ ಕಾರ್ಯಕ್ರಮಗಳು, ಜಾಥಾಗಳನ್ನು ಶಿಬಿರ ಆಯೋಜಿಸುವ ಸ್ಥಳಗಳಲ್ಲಿ ನಡೆಸಬೇಕೆಂದು ಸಲಹೆ ನೀಡಿದರು.


ಸಭೆಯಲ್ಲಿ ರೆಡ್‌ಕ್ರಾಸ್ ಸಭಾಪತಿ ಬಸ್ರೂರು ರಾಜೀವ ಶೆಟ್ಟಿ,ವಾರ್ತಾಧಿಕಾರಿ ಮಂಜುನಾಥ್ ಬಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ, ಡಯಟ್ ಹಿರಿಯ ಉಪನ್ಯಾಸಕ ಡಾ. ಅಶೋಕ್ ಕಾಮತ್, ಗೌರವ ಕಾರ್ಯದರ್ಶಿ ಡಾ. ಗಣನಾಥ ಶೆಟ್ಟಿ ಎಕ್ಕಾರು, ಪ್ರಾಧ್ಯಾಪಕ ಸೋಜನ್ ಕೆ.ಜಿ, ಯೋಗೀಶ್ ಡಿ.ಹೆಚ್, ಪ್ರೊ. ನಿಕೇತನ, ಪ್ರಾಧ್ಯಾಪಕಿ ವಿದ್ಯಾ ಡಿ, ವಿದ್ಯಾರ್ಥಿ ಪ್ರತಿನಿಧಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು. 



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
Maruti Suzuki Festival of Colours
Maruti Suzuki Festival of Colours
To Top