ಉಡುಪಿ: ಶ್ರೀ ಕೃಷ್ಣ ಮಠದಲ್ಲಿ ಗೀತಾ ಮಹೋತ್ಸವದ ಗೀತಾ ಜಯಂತಿ ಅಂಗವಾಗಿ ಪರ್ಯಾಯ ಪುತ್ತಿಗೆ ಮಠದ ಕಿರಿಯ ಶ್ರೀಗಳಾದ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರು ಶ್ರೀ ಕೃಷ್ಣನಿಗೆ ಗೀತಾಮೃತ ಮಹೋದಧಿ ಅಲಂಕಾರವನ್ನು ಮಾಡಿದರು. ನಂತರ ಪರ್ಯಾಯ ಪೀಠಾಧೀಶರಾದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಮಹಾ ಪೂಜೆಯನ್ನು ಮಾಡಿದರು. ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಗೀತಾ ಜಯಂತಿಯ ಅಂಗವಾಗಿ ರಥಬೀದಿಯಲ್ಲಿ ಚಿನ್ನದ ರಥದಲ್ಲಿ ಗೀತಾ ಪುಸ್ತಕವನ್ನಿಟ್ಟು ಭಕ್ತರನ್ನೊಳಗೊಂಡು ಅತ್ಯಂತ ವೈಭವದಿಂದ ರಥೋತ್ಸವವು ಜರುಗಿತು.
ಗೀತಾ ಜಯಂತಿಯ ಅಂಗವಾಗಿ ಉಡುಪಿಯ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ನಡೆದ ಸಭಾ ಕಾರ್ಯಕ್ರಮವನ್ನು ನವದೆಹಲಿಯ ಸ್ವಾಮಿ ನಾರಾಯಣ ರಿಸರ್ಚ್ ಇನ್ಸ್ಟಿಟ್ಯೂಟ್ ಮಹಾ ಮಹೋಪಾಧ್ಯಾಯ ಸಾಧು ಶ್ರೀ ಭದ್ರೇಶದಾಸ್ ಉದ್ಘಾಟಿಸಿದರು.
ಮುಖ್ಯ ಅತಿಥಿಗಳಾಗಿ ಮಹಾಭಾರತ ಧಾರಾವಾಹಿಯ ಕೃಷ್ಣ ಪಾತ್ರಧಾರಿ ನಿತೀಶ್ ಭಾರದ್ವಾಜ್, ನಿರೂಪಕ ಮಾಸ್ಟರ್ ಆನಂದ್, ಉದ್ಯಮಿ ಭುವನೇಂದ್ರ ಕಿದಿಯೂರು, ಮತ್ತು ಶತಾವಧಾನಿ ಡಾ. ರಾಮನಾಥ ಆಚಾರ್ಯ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಮುಖ್ಯ ಪೋಸ್ಟ್ ಮಾಸ್ಟರ್ ಜನರಲ್ ಕರ್ನಾಟಕ ವೃತ್ತ ಎಸ್. ರಾಜೇಂದ್ರ ಕುಮಾರ್ ಇವರು ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆಗೊಳಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ