ರಾಜ್ಯ ಮಹಿಳಾ ನಿಲಯದ ನಿವಾಸಿನಿಯರಿಗೆ ಕೌಶಲ್ಯಾಭಿವೃದ್ಧಿ ತರಬೇತಿ

Upayuktha
0


ಉಡುಪಿ: ಉಡುಪಿಯ ರೋಬೋಸಾಫ್ಟ್ ಟೆಕ್ನಾಲಜೀಸ್ ಇವರ ಸಿ.ಎಸ್.ಆರ್ ನಿಧಿಯಿಂದ ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ ಸಂಸ್ಥೆಯವರಿಂದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿಯ ರಾಜ್ಯ ಮಹಿಳಾ ನಿಲಯದ ನಿವಾಸಿನಿಯರಿಗೆ 21 ದಿನಗಳ ಸೀರೆಕುಚ್ಚು, ಎಂಬ್ರಾಯಿಡರಿ ಹಾಗೂ ಟೈಲರಿಂಗ್ ತರಬೇತಿ ಕಾರ್ಯಕ್ರಮದ ಉದ್ಘಾಟನಾ ಸಮಾರಂಭವು ಇತ್ತೀಚೆಗೆ ನಗರದ ನಿಟ್ಟೂರು  ರಾಜ್ಯ ಮಹಿಳಾ ನಿಲಯದಲ್ಲಿ ನಡೆಯಿತು.  


ರೋಬೋಸಾಫ್ಟ್ ಟೆಕ್ನಾಲಜಿಸ್ ಸಂಸ್ಥೆಯ ಅಸೋಸಿಯೇಟ್ ವೈಸ್ ಪ್ರೆಸಿಡೆಂಟ್ (ಆಕೌಂಟ್ಸ್) ಕೃಷ್ಣರಾಜ ರಾವ್ ಕಾರ್ಯಕ್ರಮ ಉದ್ಘಾಟಿಸಿ, ಮಾನವ ಸಂಪನ್ಮೂಲದ ಮೇಲೆ ಮಾಡುವ ಹೂಡಿಕೆಯು ದೀರ್ಘಕಾಲದ ಫಲಿತಾಂಶ ನೀಡುತ್ತದೆ ಎಂದ ಅವರು, ತರಬೇತಿಯ ಪ್ರಯೋಜನವನ್ನು ನಿವಾಸಿನಿಯರು ಪಡೆಯುವಂತೆ ತಿಳಿಸಿದರು. 


ಭಾರತೀಯ ವಿಕಾಸ ಟ್ರಸ್ಟ್ ಸಂಸ್ಥೆಯ ಕಾರ್ಯಕ್ರಮ ಸಂಯೋಜಕಿ ಲಕ್ಷ್ಮೀಬಾಯಿ, ತರಬೇತಿಯ ಮಹತ್ವ ತಿಳಿಸುತ್ತಾ ನಿವಾಸಿನಿಯರು ಸಂಸ್ಥೆಯಿಂದ ಹೊರಗಡೆ ಹೋಗಿ ಬದುಕಲು ಸಹಾಯಕವಾಗುವುದರಿಂದ ಎಲ್ಲರೂ ತರಬೇತಿ ಪಡೆಯುವಂತೆ ಹುರಿದುಂಬಿಸಿದರು. 


ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಶ್ಯಾಮಲಾ ಸಿ. ಕೆ., ಜಿಲ್ಲಾ ನಿರೂಪಣಾ ಅಧಿಕಾರಿ ಅನುರಾಧ ಹಾದಿಮನಿ, ಸಂಸ್ಥೆಯ ಅಧೀಕ್ಷಕಿ ಪುಷ್ಪರಾಣಿ ಹೆಚ್., ಸಂಪನ್ಮೂಲ ವ್ಯಕ್ತಿಗಳಾದ ರಮ್ಯ ಎ.ಸಿ. ಮುಕ್ತ ಶ್ರೀನಿವಾಸ, ಸನ್ನಿಹಿತ, ಸಂಸ್ಥೆಯ ಸಿಬ್ಬಂದಿಗಳು ಹಾಗೂ ನಿವಾಸಿನಿಯರು ಉಪಸ್ಥಿತರಿದ್ದರು.



 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top