ಉಡುಪಿ: ಕ್ಷಯರೋಗ ನಿವಾರಣೆ- 100 ದಿನಗಳ ಅಭಿಯಾನಕ್ಕೆ ನಾಳೆ ಚಾಲನೆ

Chandrashekhara Kulamarva
0


ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ 100 ದಿನಗಳ ಕ್ಷಯರೋಗ ನಿವಾರಣಾ ಅಭಿಯಾನ ಉದ್ಘಾಟನೆ ಸಮಾರಂಭ ಹಾಗೂ ಕ್ಷಯ ಮುಕ್ತ ಗ್ರಾಮ ಪಂಚಾಯತ್ ಪ್ರಶಸ್ತಿ ಪ್ರದಾನ ಸಮಾರಂಭ ಕಾರ್ಯಕ್ರಮವು ಡಿಸೆಂಬರ್ 7 ರಂದು ಮಧ್ಯಾಹ್ನ 2 ಗಂಟೆಗೆ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ. ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆಯಲಿದೆ.


ಕಾರ್ಯಕ್ರಮವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳ್ಕರ್ ಉದ್ಘಾಟಿಸಲಿದ್ದು, ಶಾಸಕ ಯಶ್‌ಪಾಲ್ ಎ ಸುವರ್ಣ ಅಧ್ಯಕ್ಷತೆ ವಹಿಸಲಿದ್ದಾರೆ.


ಕಾರ್ಯಕ್ರಮದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್, ಸಂಸದರಾದ ಬಿ.ವೈ ರಾಘವೇಂದ್ರ ಹಾಗೂ ಕೋಟ ಶ್ರೀನಿವಾಸ ಪೂಜಾರಿ, ಶಾಸಕರುಗಳಾದ ವಿ ಸುನಿಲ್ ಕುಮಾರ್, ಗುರುರಾಜ್ ಶೆಟ್ಟಿ ಗಂಟಿಹೊಳೆ, ಎ ಕಿರಣ್ ಕುಮಾರ್ ಕೊಡ್ಗಿ ಹಾಗೂ ಗುರ್ಮೆ ಸುರೇಶ್ ಶೆಟ್ಟಿ, ವಿಧಾನಪರಿಷತ್ ಶಾಸಕರುಗಳಾದ ಎಸ್.ಎಲ್. ಭೋಜೇಗೌಡ, ಮಂಜುನಾಥ್ ಭಂಡಾರಿ, ಡಾ. ಧನಂಜಯ ಸರ್ಜಿ ಹಾಗೂ ಕಿಶೋರ್ ಕುಮಾರ್ ಪುತ್ತೂರು, ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸತ್ಯವತಿ ಜಿ, ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಅರುಣ್ ಕೆ ಹಾಗೂ ಮತ್ತಿತರರು ಭಾಗವಹಿಸಲಿದ್ದಾರೆ.



 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
To Top