ಕಲೆ ಮತ್ತು ಸಂಸ್ಕೃತಿಯನ್ನು ಜಾಗತಿಕ ಮಟ್ಟದಲ್ಲಿ ಪರಿಚಯಿಸಲು ಸಾಧ್ಯ: ಪೂರನ್ ವರ್ಮ

Upayuktha
0

ಬೆಳ್ತಂಗಡಿ ರೋಟರಿ ಕ್ಲಬ್: ಅಂತಾರಾಷ್ಟ್ರೀಯ ಸಾಂಸ್ಕೃತಿಕ ವಿನಿಮಯ ಕಾರ್ಯಕ್ರಮಕ್ಕೆ ಚಾಲನೆ.


ಉಜಿರೆ:  ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿ ರೋಟರಿ ಕ್ಲಬ್ ಬೆಳ್ತಂಗಡಿ ಮತ್ತು  ಪಠ್ಯೇತರ ಚಟುವಟಿಕೆ ಸಮಿತಿ ಅವರು ಆಶ್ರಯದಲ್ಲಿ ಇಂದು ಕಾಲೇಜಿನ ಕಲಾಕೇಂದ್ರ ಮತ್ತು ಕಾಂಬೋಡಿಯಾದ ವಿದ್ಯಾರ್ಥಿಗಳ ನಡುವಿನ 7 ದಿನದ ಅಂತಾರಾಷ್ಟ್ರೀಯ ಸಾಂಸ್ಕೃತಿಕ ವಿನಿಮಯ ಕಾರ್ಯಕ್ರಮಕ್ಕೆ  ಚಾಲನೆ ನೀಡಲಾಯಿತು.


ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಎಸ್. ಡಿ. ಎಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ ಚಂದ್ರ ಎಸ್. ಈ ಕಾರ್ಯಕ್ರಮಗಳು ವೈಯಕ್ತಿಕ ಅಭಿವೃದ್ಧಿಗೆ ಕೊಡುಗೆ ನೀಡುತ್ತವೆ, ವಿದ್ಯಾರ್ಥಿಗಳು ಹೆಚ್ಚು ತೊಡಗಿಸಿಕೊಳ್ಳಲು, ಸಾಂಸ್ಕೃತಿಕವಾಗಿ ಸಮರ್ಥರಾಗಲು ಮತ್ತು ಅಂತರ್ಸಂಪರ್ಕಿತ ಜಗತ್ತಿಗೆ ಸಿದ್ಧರಾಗಲು ಸಹಾಯ ಮಾಡುತ್ತದೆ.


ಕಾರ್ಯಕ್ರಮ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದ  ರೋಟರಿ ಕ್ಲಬ್ ಬೆಳ್ತಂಗಡಿಯ ಅಧ್ಯಕ್ಷ ಪೂರನ್ ವರ್ಮ, ವಿದ್ಯಾರ್ಥಿಗಳ ವೈಯಕ್ತಿಕ ಮತ್ತು ಶೈಕ್ಷಣಿಕ ಬೆಳವಣಿಗೆಯನ್ನು ರೂಪಿಸುವಲ್ಲಿ ಅಂತರರಾಷ್ಟ್ರೀಯ ಸಂಸ್ಕೃತಿ ವಿನಿಮಯ ಕಾರ್ಯಕ್ರಮಗಳು ಪ್ರಮುಖ ಪಾತ್ರವಹಿಸುತ್ತವೆ. ಇಂತಹ ಕಾರ್ಯಕ್ರಮಗಳಿಗೆ  ರೋಟರಿ ಸಂಸ್ಥೆ ಬಹುದೊಡ್ಡ ವೇದಿಕೆಯಾಗಿದೆ. ಬಂದಿರುವ ಅತಿಥಿ ಕಲಾವಿದರ ಜೊತೆ ಉತ್ತಮ ಬಾಂಧವ್ಯ ಬೆಳೆಸುವುದರ ಜೊತೆಗೆ  ನಮ್ಮ ಕಲೆ, ಭಾಷೆ ಮತ್ತು ಆಚರಣೆಗಳನ್ನು ತಿಳಿಸಬೇಕು ಎಂದು ಕಿವಿಮಾತು ಹೇಳಿದರು.


ಕಾರ್ಯಕ್ರಮದ ವೇದಿಕೆಯಲ್ಲಿ ಎಸ್. ಡಿ. ಎಂ. ಕಾಲೇಜಿನ ಪ್ರಾಂಶುಪಾಲ  ಡಾ. ಬಿ. ಎ ಕುಮಾರ ಹೆಗ್ಡೆ, ವಲಯ ಸೇನಾನಿ ರೊಟೇರಿಯನ್ ಮನೋರಮಾ , ಬೆಳ್ತಂಗಡಿ ರೋಟರಿ ಕ್ಲಬ್ ಕಾರ್ಯದರ್ಶಿ ಸಂದೇಶ್ ಕುಮಾರ್ ರಾವ್ ,  ಸೋನಿಯಾ ಯಶೋವರ್ಮ,  ರಿಯೋ ನಾಗಯಾಮ ಉಪಸ್ಥಿತರಿದ್ದರು.


ಕಾರ್ಯಕ್ರಮದಲ್ಲಿ ಕಾಂಬೋಡಿಯ ಮತ್ತು ಜಪಾನ್ ನ ವಿದ್ಯಾರ್ಥಿಗಳು ಸೇರಿದಂತೆ ಎಸ್.ಡಿ.ಎಂ ಕಲಾ ಕೇಂದ್ರದ ವಿದ್ಯಾರ್ಥಿಗಳು, ಆನ್ಸ್ ಕ್ಲಬ್ ಅಧ್ಯಕ್ಷೆ ಗಾಯತ್ರಿ ಶ್ರೀಧರ್, ಬೈತಂಗಡಿ ರೋಟರಿ ಕ್ಲಬ್ ಸದಸ್ಯರು ಹಾಗು ಉಪನ್ಯಾಸರು ಭಾಗಿಯಾಗಿದ್ದರು. ಕಾರ್ಯಕ್ರಮವನ್ನು ಪ್ರಾಧ್ಯಾಪಕಿ ಅಪೂರ್ವ  ನಿರೂಪಿಸಿ, ಉಪನ್ಯಾಸಕ ಸುಧೀರ್ ಕೆ ವಿ  ವಂದಿಸಿದರು.


ಈ ಕಾರ್ಯಕ್ರಮಗಳು ವಿದ್ಯಾರ್ಥಿಗಳಿಗೆ ವೈವಿಧ್ಯಮಯ ಸಂಸ್ಕೃತಿಗಳನ್ನು ಅನುಭವಿಸಲು ಅವಕಾಶವನ್ನು ನೀಡುತ್ತವೆ, ಜಾಗತಿಕ ತಿಳುವಳಿಕೆ ಮತ್ತು ಸಹಾನುಭೂತಿಯನ್ನು ಉತ್ತೇಜಿಸುತ್ತವೆ. ವಿಭಿನ್ನ ಹಿನ್ನೆಲೆಯ ಗೆಳೆಯರೊಂದಿಗೆ ಸಂವಹನ ನಡೆಸುವ ಮೂಲಕ, ವಿದ್ಯಾರ್ಥಿಗಳು ತಮ್ಮ ದೃಷ್ಟಿಕೋನವನ್ನು ವಿಸ್ತರಿಸುತ್ತಾರೆ ಮತ್ತು ವಿವಿಧ ಸಂಪ್ರದಾಯಗಳು, ಭಾಷೆಗಳು ಮತ್ತು ಜೀವನಶೈಲಿಗಳ ಬಗ್ಗೆ ಕಲಿಯುತ್ತಾರೆ. ಅಂತಹ ಅನುಭವಗಳು ಸಂವಹನ ಕೌಶಲ್ಯಗಳನ್ನು ಹೆಚ್ಚಿಸುತ್ತವೆ, ಪರಸ್ಪರ ಗೌರವ ಮತ್ತು ಸಹನೆಯನ್ನು ಬೆಳೆಸುತ್ತವೆ.


  ಪೂರನ್ ವರ್ಮ

  ಬೆಳ್ತಂಗಡಿ ರೋಟರಿ ಕ್ಲಬ್, ಅಧ್ಯಕ್ಷ



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top