ದುಬೈ: ಯುಎಇ ಯ ಬಹು ಪ್ರತಿಷ್ಠಿತ ಬಂಟ್ಸ್ ಸಂಘದ 2025 ಮತ್ತು 2026ರ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಇತ್ತೀಚೆಗೆ ದುಬೈ ಬಂಟರ ಸಂಘದಲ್ಲಿ ನಡೆದು ನುಾತನ ಅಧ್ಯಕ್ಷರಾಗಿ ದುಬೈಯ ಫಾಚೂ೯ನ್ ಗ್ರೂಪ್ ಹೊಟೇಲ್ಸ್ ಮ್ಯಾನೇಜಿಂಗ್ ಡೈರೆಕ್ಟರ್ ವಕ್ವಾಡಿ ಪ್ರವೀಣ್ ಕುಮಾರ್ ಶೆಟ್ಟಿಯವರು ಅವಿರೇೂಧವಾಗಿ ಆಯ್ಕೆಯಾದರು.
ಈ ಹಿಂದೆ ಯು.ಎ.ಇ. ಬಂಟ್ಸ್ ಸಂಘದ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ನಿಕಟ ಪೂರ್ವ ಅಧ್ಯಕ್ಷ ಸರ್ವೋತ್ತಮ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಹೊಸ ಪದಾಧಿಕಾರಿಗಳ ಆಯ್ಕೆ ನಡೆಯಿತು. ಮುಂದಿನ ಉಪಾಧ್ಯಕ್ಷರಾಗಿ ಪ್ರೇಮನಾಥ ಶೆಟ್ಟಿ, ಕಾರ್ಯದರ್ಶಿಯಾಗಿ ರವಿರಾಜ್ ಶೆಟ್ಟಿಯವರು ಆಯ್ಕೆಗೊಂಡರು. ನಿಕಟ ಪೂರ್ವಾಧ್ಯಕ್ಷ ಸರ್ವೋತ್ತಮ ಶೆಟ್ಟಿಯವರು ಮಹಾ ಪೇೂಷಕರಾಗಿ ನಿಯುಕ್ತರಾದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ