ವಿವೇಕಾನಂದ ಪದವಿ ಪೂರ್ವ ಕಾಲೇಜಿನಿಂದ "ಮೇಧಾ - 2025" - ಉಚಿತ ಶಿಕ್ಷಣ ಯೋಜನೆ

Upayuktha
0

  • ಡಿಸೆಂಬರ್ 1 ರಂದು ಉಚಿತ ಶಿಕ್ಷಣಕ್ಕಾಗಿ ಪ್ರವೇಶ ಪರೀಕ್ಷೆ
  • ದಕ್ಷಿಣಕನ್ನಡ ಹಾಗೂ ಕಾಸರಗೋಡು ಜಿಲ್ಲೆಯ 5 ವಿವಿಧ ಪರೀಕ್ಷಾ ಕೇಂದ್ರದಲ್ಲಿ ಏಕಕಾಲದಲ್ಲಿ ಪರೀಕ್ಷೆ



ಪುತ್ತೂರು: ವಿವೇಕಾನಂದ ಪದವಿಪೂರ್ವ ಕಾಲೇಜಿನ ವತಿಯಿಂದ ನಡೆಯುವ "ಮೇಧಾ - 2025" - ಉಚಿತ ಶಿಕ್ಷಣ ಯೋಜನೆಯ ಪ್ರವೇಶ ಪರೀಕ್ಷೆ 2024 ರಡಿಸೆಂಬರ್ 1 ರಂದು ದಕ್ಷಿಣ ಕನ್ನಡ ಹಾಗೂ ಕಾಸರಗೋಡು ಜಿಲ್ಲೆಯ 5 ವಿವಿಧ ಕೇಂದ್ರಗಳಲ್ಲಿ ಬೆಳಗ್ಗೆ 10 ಗಂಟೆಗೆ ಸರಿಯಾಗಿ ನಡೆಯಲಿದೆ. 


ಪುತ್ತೂರಿನ ನೆಹರು ನಗರದ ವಿವೇಕಾನಂದ ಆವರಣದಲ್ಲಿರುವ ವಿವೇಕಾನಂದ ಪದವಿ ಪೂರ್ವ ಕಾಲೇಜು, ತೆಂಕಿಲದ ವಿವೇಕಾನಂದ ಆವರಣದಲ್ಲಿರುವ ವಿವೇಕಾನಂದ ಆಂಗ್ಲಮಾಧ್ಯಮ ಶಾಲೆ, ಕಡಬದ ಆಲಂಕಾರಿನಲ್ಲಿರುವ ಶ್ರೀ ಭಾರತಿ ಪ್ರೌಢಶಾಲೆ, ಸುಳ್ಯದ ಜಾಲ್ಸೂರಿನಲ್ಲಿರುವ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ಹಾಗೂ ಕೇರಳದ ಕಾಸರಗೋಡು ಜಿಲ್ಲೆಯ ಬದಿಯಡ್ಕದಲ್ಲಿರುವ ಶ್ರೀ ಭಾರತಿ ವಿದ್ಯಾಪೀಠ ಪರೀಕ್ಷಾ ಕೇಂದ್ರಗಳಾಗಿರಲಿವೆ. ಪರೀಕ್ಷೆಗೆ ಈಗಾಗಲೇ ನೋಂದಾಯಿಸಿದ ವಿದ್ಯಾರ್ಥಿಗಳು ತಾವು ನೋಂದಾಯಿಸಿದ ಕೇಂದ್ರದಲ್ಲಿ ಬೆಳಗ್ಗೆ 9.30 ಕ್ಕೆ ಸರಿಯಾಗಿ ಹಾಜರಿರುವುದು. 


ವಿದ್ಯಾರ್ಥಿಗಳು ಮಾಹಿತಿಗಾಗಿ ಕಾಲೇಜಿನ ಜಾಲತಾಣ www.vivekanandapuc.com ಇದನ್ನು ಸಂದರ್ಶಿಸಬಹುದು. ಹೆಚ್ಚಿನ ಮಾಹಿತಿಗಾಗಿ 94809 36010, 89719 24424, 80737 00468, 81050 72386 ಸಂಪರ್ಕ ಸಂಖ್ಯೆಗಳನ್ನು ಸಂಪರ್ಕಿಸಬಹುದು.


 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top