ಬಳ್ಳಾರಿ: ಮಹಿಳಾ ಸಬಲೀಕರಣ ಸಮಾಜದಲ್ಲಿ ಬಹುಮುಖ್ಯವಾಗಿದ್ದು, ಮಹಿಳೆಯರು ವಿವಿಧ ರೀತಿಯ ಸ್ವ-ಉದ್ಯೋಗ ಮಾಡಲು ಸೃಜನಾತ್ಮಕ ಕೌಶಲ್ಯ ಬೆಳೆಸಿಕೊಳ್ಳಬೇಕು ಎಂದು ಕೆನರಾ ಬ್ಯಾಂಕ್‍ನ ಲೀಡ್ ಡಿಸ್ಟ್ರೀಕ್ ಮ್ಯಾನೇಜರ್ ಗಿರೀಶ ವಿ ಕುಲಕರ್ಣಿ ಅವರು ಹೇಳಿದರು.ಕೆನರಾ ಬ್ಯಾಂಕ್ ವತಿಯಿಂದ ಉಚಿತ ಹೊಲಿಗೆ ಯಂತ್ರ ತರಬೇತಿ ಹೊಂದಿದ ಮಹಿಳೆಯರಿಗೆ ಸಂಸ್ಥೆಯ ಆವರಣದಲ್ಲಿ ಮಂಗಳವಾರ ಟೂಲ್‍ಕಿಟ್ ವಿತರಿಸಿ ಅವರು ಮಾತನಾಡಿದರು.
ಮಹಿಳೆಯರು ಮನೆಯಲ್ಲಿ ಕುಳಿತು ಟೈಲರಿಂಗ್ ಮಾಡುವುದರಿಂದ ಸ್ವಾವಲಂಬಿ ಜೀವನ ರೂಪಿಸಿಕೊಳ್ಳುತ್ತಾರೆ ಹಾಗೂ ಸಮಾಜದಲ್ಲಿ ಉತ್ತಮ ಜೀವನ ನಡೆಸಲು ಈ ಹೋಲಿಗೆ ತರಬೇತಿ ಸಹಕಾರಿಯಾಗಲಿದೆ ಎಂದರು.
ಕೆನರಾ ಬ್ಯಾಂಕ್‍ನ ವಿಭಾಗೀಯ ಪ್ರಬಂಧಕರಾದ ಮಾಲತಿ ಅವರು ಮಾತನಾಡಿ, ಮಹಿಳೆಯರು ಮನೆಯಲ್ಲಿ ಟೈಲರಿಂಗ್ ಮಾಡಿಕೊಂಡು ಆರ್ಥಿಕವಾಗಿ ಕುಟುಂಬ ನಿರ್ವಹಣೆಗೆ ಸಹಕಾರಿಯಾಗುತ್ತದೆ ಎಂದು ಹೇಳಿದರು.
ನಿರ್ದೇಶಕರಾದ ರಾಜೆಸಾಬ್.ಎಚ್ ಎರಿಮನಿ ಮಾತನಾಡಿ, ಸಂಸ್ಥೆಯ ತರಬೇತಿಯಲ್ಲಿ ಕೌಶಲ್ಯದ ಜೊತೆಗೆ ಆತ್ಮವಿಶ್ವಾಸ, ವ್ಯಕ್ತಿತ್ವ ವಿಕಸನದ ಮಾಹಿತಿ ನೀಡಲಾಗುತ್ತಿದ್ದು, ತಮ್ಮ ವೃತ್ತಿ ಜೀವನದಲ್ಲಿ ಅಳವಡಿಸಿಕೊಳ್ಳುವಂತೆ ತಿಳಿಸಿದರು.
ಈ ಸಂಧರ್ಭದಲ್ಲಿ ಜಿಲ್ಲಾ ಪಂಚಾಯತ್‍ನ ಎನ್‍ಆರ್‍ಎಲ್‍ಎಂ ಘಟಕದ ರಾಜೇಂದ್ರ ವಿಜಯ ಕುಮಾರ ಸೇರಿದಂತೆ ಜಡೆಪ್ಪ, ದಿನೇಶ, ಸಿದ್ದಲಿಂಗಮ್ಮ, ಮಂಜುಳಾ, ಸಂತೋಷ ಕುಮಾರ್, ಕಿರಣ ಕುಮಾರ ಹಾಗೂ ಶಿಭಿರಾರ್ಥಿಗಳು ಇದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ