ಮಿಜಾರು: ಮಂಗಳೂರಿನ ಸಸಿಹಿತ್ಲುವಿನಲ್ಲಿ ಈಚೆಗೆ ನಡೆದ ಜಿಲ್ಲಾ ಮಟ್ಟದ ಯುವಜನೋತ್ಸವದಲ್ಲಿ ಸ್ಪರ್ಧಿಸಿದ ಆಳ್ವಾಸ್ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕಾಲೇಜಿನ ವಿದ್ಯಾರ್ಥಿಗಳು ಹಲವು ಪ್ರಶಸ್ತಿಗಳನ್ನು ಗೆದ್ದಿದ್ದಾರೆ.
ಜನಪದ ನೃತ್ಯ (ಡೊಳ್ಳು- ಪ್ರಥಮ), ಜನಪದ ನೃತ್ಯ (ಏಕವ್ಯಕ್ತಿ) ಪ್ರಥಮ, ಕತೆ ಬರೆಯುವುದು- ಪ್ರಥಮ ಮತ್ತು ದ್ವಿತೀಯ, ಭಾಷಣ ಕಲೆ -ಪ್ರಥಮ, ಕವಿತೆ ಬರೆಯುವುದು -ಪ್ರಥಮ ಮತ್ತು ದ್ವಿತೀಯ ಬಹುಮಾನ ಪಡೆದಿದ್ದಾರೆ.
ಪ್ರಥಮ ಬಹುಮಾನ ವಿಜೇತರು ರಾಜ್ಯಮಟ್ಟದ ಯುವಜನೋತ್ಸವಕ್ಕೆ ಆಯ್ಕೆಯಾಗಿದ್ದಾರೆ.
ವಿಜೇತ ವಿದ್ಯಾರ್ಥಿಗಳನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ, ಟ್ರಸ್ಟಿ ವಿವೇಕ ಆಳ್ವ ಅಭಿನಂದಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ